ನಟ ಅರ್ಜುನ್ ರಾಂಪಾಲ್ ವಿರುದ್ಧದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ರಾಮ್‌ಪಾಲ್ ವಿರುದ್ಧ ದಾಖಲಾಗಿರುವ ಅಪರಾಧವು ಗರಿಷ್ಠ ಮೂರು ವರ್ಷಗಳ ಶಿಕ್ಷೆಗೆ ಅರ್ಹವಾಗಿದ್ದು, ಅದು ಜಾಮೀನು ನೀಡಬಹುದಾದ ಅಪರಾಧ ಎಂದು ನ್ಯಾಯಮೂರ್ತಿ ಸೇತ್ನಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಮುಂಬೈ: 2019 ರ ತೆರಿಗೆ ವಂಚನೆ ಪ್ರಕರಣದಲ್ಲಿ ನಟ ಅರ್ಜುನ್ ರಾಂಪಾಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದ ಸ್ಥಳೀಯ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
ವಾರಂಟ್ ರದ್ದು ಕೋರಿ ನಟ ಅರ್ಜುನ್ ರಾಂಪಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅದ್ವೈತ್ ಸೇಥ್ನಾ ಅವರ ರಜಾ ಕಾಲದ ಪೀಠ, ಮೇ 16 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 276C(2) ಅಡಿಯಲ್ಲಿನ ಅಪರಾಧಕ್ಕಾಗಿ ಐ-ಟಿ ಇಲಾಖೆ ತನಿಖೆ ಆರಂಭಿಸಿದ 2019 ರ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಮ್ಮ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಅರ್ಜುನ್ ರಾಂಪಾಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಸೆಕ್ಷನ್ ತೆರಿಗೆ, ದಂಡ ಅಥವಾ ಬಡ್ಡಿ ಪಾವತಿಯನ್ನು ಉದ್ದೇಶಪೂರ್ವಕವಾಗಿ ತಪ್ಪಿಸಲು ಪ್ರಯತ್ನಿಸುವ ವ್ಯಕ್ತಿಗೆ ಸಂಬಂಧಿಸಿದೆ.
ನಟನ ಮನವಿಯ ಪ್ರಕಾರ, ಅವರ ವಕೀಲರು ಹಾಜರಾತಿಯಿಂದ ವಿನಾಯಿತಿ ಕೋರಿ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ನ್ಯಾಯಾಲಯ ಅದನ್ನು ತಿರಸ್ಕರಿಸಿ, ರಾಂಪಾಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ ಎಂದು ಹೈಕೋರ್ಟ್ ಹೇಳಿದೆ.
ರಾಮ್‌ಪಾಲ್ ವಿರುದ್ಧ ದಾಖಲಾಗಿರುವ ಅಪರಾಧವು ಗರಿಷ್ಠ ಮೂರು ವರ್ಷಗಳ ಶಿಕ್ಷೆಗೆ ಅರ್ಹವಾಗಿದ್ದು, ಅದು ಜಾಮೀನು ನೀಡಬಹುದಾದ ಅಪರಾಧ ಎಂದು ನ್ಯಾಯಮೂರ್ತಿ ಸೇತ್ನಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



