ಪ್ರಶ್ನೆ, ಟೀಕೆಗಳಿಂದ ಗಮನ ಬೇರೆಡೆಗೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷಗಳ ನಿಯೋಗ ಕಳುಹಿಸುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ
ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆ.

ನವದೆಹಲಿ: ತಮ್ಮ ನಾಯಕತ್ವದ ಬಗ್ಗೆ ಹೆಚ್ಚುತ್ತಿರುವ ಟೀಕೆಗಳು ಮತ್ತು ಪ್ರಶ್ನೆಗಳಿಂದ ಗಮನ ಬೇರೆಡೆ ಸೆಳೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದ್ದಕ್ಕಿದ್ದಂತೆ ವಿದೇಶಗಳಿಗೆ ವಿಪಕ್ಷಗಳ ನಿಯೋಗಗಳನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 34 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರತಿ ಅಕ್ಟೋಬರ್-ನವೆಂಬರ್‌ನಲ್ಲಿ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಗೆ ವಿವಿಧ ಪಕ್ಷಗಳ ಸಂಸದರನ್ನು ಕಳುಹಿಸುವ ಪದ್ಧತಿ 1950 ರ ದಶಕದಿಂದಲೂ ಜಾರಿಯಲ್ಲಿದೆ. ಆದರೆ, 2014 ರಲ್ಲಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಈ ಸಂಪ್ರದಾಯವನ್ನು ನಿಲ್ಲಿಸಲಾಯಿತು.
ಈಗ, ಹತಾಶ ಮತ್ತು ಗಂಭೀರ ಪ್ರಶ್ನೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಗಮನ ಬೇರೆಡೆ ಸೆಳೆಯಲು ವಿದೇಶಗಳಿಗೆ ಸರ್ವಪಕ್ಷ ಸಂಸದರ ನಿಯೋಗಗಳ ಕಳುಹಿಸುತ್ತಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ರಾಜೀವ್ ಗಾಂಧಿಯವರಿಗೆ ಗೌರವಸಲ್ಲಿಸಿರುವ ಅವರು, ರಾಜೀವ್ ಗಾಂಧಿಯವರ "ಮಾನವೀಯತೆ, ಒಳ್ಳೆಯತನ ಮತ್ತು ಸಭ್ಯತೆ ಗುಣಗಳು ಪ್ರಸ್ತುತ ಪ್ರಧಾನಿಯಲ್ಲಿ ಕಾಣೆಯಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ವಾಜಪೇಯಿ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದರೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿದೇಶದಲ್ಲಿ ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ಮಾಡಿದ ಹಾಗೂ ಚಿಕಿತ್ಸೆ ಬಗ್ಗೆ ವಾಜಪೇಯಿಯವರು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿದೇಶಗಳಿಗೆ ಸರ್ವಪಕ್ಷ ನಿಯೋಗ: Mamata ಜೊತೆ Kiren Rijiju ಚರ್ಚೆ; ಪಠಾಣ್ ಔಟ್, ಅಭಿಷೇಕ್ ಬ್ಯಾನರ್ಜಿ ಇನ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


