ಕೇರಳದಲ್ಲಿ ಮಳೆಯ ರೌದ್ರನರ್ತನ: ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ. ಈ ಮಾಹಿತಿಯನ್ನು ಹವಾಮಾನ ಇಲಾಖೆ (ಐಎಂಡಿ) ನೀಡಿದೆ.
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.
IMD ದತ್ತಾಂಶದ ಪ್ರಕಾರ, ಮಾನ್ಸೂನ್ ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8 ರಂದು, 2022 ರಲ್ಲಿ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತು.
ಕೇರಳಕ್ಕೆ ಮುಂಗಾರು ಬೇಗ ಅಥವಾ ತಡವಾಗಿ ಬಂದರೂ ಅದು ದೇಶದ ಇತರ ಭಾಗಗಳನ್ನು ಅದೇ ರೀತಿಯಲ್ಲಿ ತಲುಪುತ್ತದೆ ಎಂದು ಅರ್ಥವಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ದೊಡ್ಡ ಪ್ರಮಾಣದ ವ್ಯತ್ಯಾಸಕ್ಕೆ ಒಳಪಟ್ಟಿರುತ್ತದೆ ಮತ್ತು ಜಾಗತಿಕ, ಪ್ರಾದೇಶಿಕ ಮತ್ತು ಸ್ಥಳೀಯ ಅಂಶಗಳಿಂದ ನಿರ್ಧರಿಸಲ್ಪಡುತ್ತದೆ. ಈ ವರ್ಷದ ಮಾನ್ಸೂನ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಏಪ್ರಿಲ್‌ನಲ್ಲಿ ಐಎಂಡಿ ಮುನ್ಸೂಚನೆ ನೀಡಿತ್ತು. ಇದು ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆಯನ್ನು ತಳ್ಳಿಹಾಕಿತು. ಎಲ್ ನಿನೊ ವ್ಯವಸ್ಥೆಯು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಗೆ ಕಾರಣವಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



