ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ ಪ್ರೀತಿ ಜಿಂಟಾ 1.10 ಕೋಟಿ ರೂ ದೇಣಿಗೆ
"ವೀರ್ ನಾರಿಸ್ ಅವರನ್ನು ಸಬಲೀಕರಣಗೊಳಿಸುವುದು ಮತ್ತು ಅವರ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವುದು ಈ ದೇಣಿಗೆಯ ಉದ್ದೇಶವಾಗಿದೆ" ಎಂದು ಪ್ರೀತಿ ಜಿಂಟಾ ಹೇಳಿದ್ದಾರೆ.

ನವದೆಹಲಿ: ಪಂಜಾಬ್ ಕಿಂಗ್ಸ್ ಸಹ-ಮಾಲೀಕರಾಗಿರುವ ಬಾಲಿವುಡ್ ನಟಿ ಪ್ರೀತಿ ಜಿ ಜಿಂಟಾ ಅವರು ಆಪರೇಷನ್ ಸಿಂಧೂರ್ ಉಪಕ್ರಮದ ಅಡಿಯಲ್ಲಿ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ(AWWA) 1.10 ಕೋಟಿ ರೂ.ಗಳನ್ನು ದೇಣಿಗೆ ನೀಡಿದ್ದಾರೆ ಎಂದು ಶನಿವಾರ ಪ್ರಕಟಣೆ ತಿಳಿಸಿದೆ.
ಪಂಜಾಬ್ ಕಿಂಗ್ಸ್‌ನ ಸಿಎಸ್‌ಆರ್ ನಿಧಿಯ ತಮ್ಮ ಪಾಲಿನಿಂದ ಈ ಕೊಡುಗೆ ನೀಡಲಾಗಿದೆ ಎಂದು ನಟಿ ತಿಳಿಸಿದ್ದಾರೆ.
"ವೀರ್ ನಾರಿಸ್ ಅವರನ್ನು ಸಬಲೀಕರಣಗೊಳಿಸುವುದು ಮತ್ತು ಅವರ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವುದು ಈ ದೇಣಿಗೆಯ ಉದ್ದೇಶವಾಗಿದೆ" ಎಂದು ಪ್ರೀತಿ ಜಿಂಟಾ ಹೇಳಿದ್ದಾರೆ.
ಜೈಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, "ನಮ್ಮ ಸಶಸ್ತ್ರ ಪಡೆಗಳ ಧೈರ್ಯಶಾಲಿ ಕುಟುಂಬಗಳಿಗೆ ನೆರವಾಗುವುದು ನನಗೆ ಗೌರವ ಮತ್ತು ಜವಾಬ್ದಾರಿ ಎರಡೂ ಆಗಿದೆ. ನಮ್ಮ ಸೈನಿಕರು ಮಾಡಿದ ತ್ಯಾಗಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ನಾವು ಅವರ ಕುಟುಂಬಗಳೊಂದಿಗೆ ನಿಲ್ಲಬಹುದು ಮತ್ತು ಅವರ ಮುಂದಿನ ಪ್ರಯಾಣವನ್ನು ಬೆಂಬಲಿಸಬಹುದು. ಭಾರತದ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವ ಅವರ ಪ್ರಯತ್ನಗಳಿಗೆ ಅಚಲ ಬೆಂಬಲ ನೀಡುತ್ತೇವೆ. ನಾವು ರಾಷ್ಟ್ರ ಮತ್ತು ನಮ್ಮ ಧೈರ್ಯಶಾಲಿ ಪಡೆಗಳೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



