ಹರ್ಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ: ಪಾರ್ಕ್ ಮಾಡಿದ್ದ ಕಾರಿನಲ್ಲಿ ಶವ ಪತ್ತೆ
ಡೆಹ್ರಾಡೂನ್ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು.

ಪಂಚಕುಲ(ಡೆಹ್ರಾಡೂನ್): ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್ ಮೂಲದ ಆರು ಮಂದಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು ಲಾಕ್ ಆಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೂಲಗಳ ಪ್ರಕಾರ, ಕುಟುಂಬ ಸದಸ್ಯರು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿದ್ದರಿಂದ ಈ ಕಠಿಣ ಕ್ರಮ ಕೈಗೊಂಡಿದೆ. ಡೆಹ್ರಾಡೂನ್ನ ನಿವಾಸಿ ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತನ್ನ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್ಗೆ ಹಿಂತಿರುಗಿದ ನಂತರ ಕಳೆದ ಭಾನುವಾರ ಈ ಘಟನೆ ನಡೆದಿದೆ.
ಕಾರಿನೊಳಗೆ ಕುಟುಂಬ ಸದಸ್ಯರು ಹೆಣಗಾಡುತ್ತಿರುವುದನ್ನು ನೋಡಿದ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಆಗಮಿಸುತ್ತಿದ್ದಂತೆಯೇ ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಪ್ರವೀಣ್ ಮಿತ್ತಲ್ (42ವ), ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಆರಂಭಿಕ ತನಿಖೆಯ ನಂತರ, ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಆಗಮಿಸಿ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಶ್ಲೇಷಿಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.
ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



