ದೇಶ

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರ ಬೆಂಬಲ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

ಸಿಂಗ್ ಮತ್ತು ಇತರ ಒಂಬತ್ತು ಶಾಸಕರು ಇಂದು ರಾಜಭವನಕ್ಕೆ ಭೇಟಿ ನೀಡಿ, ಸರ್ಕಾರ ರಚನೆ ಕುರಿತು ರಾಜ್ಯಪಾಲರೊಂದಿಗೆ ಚರ್ಚಿಸಿದರು.

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರ ಬೆಂಬಲ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ
ಮಾಜಿ ಸಿಎಂ ಎನ್. ಬಿರೇನ್ ಸಿಂಗ್
Published On :

ಇಂಫಾಲ್: ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತನಾಲ್ಕು ಶಾಸಕರ ಬೆಂಬಲ ಇದೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಅವರು ಬುಧವಾರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ಸಿಂಗ್ ಮತ್ತು ಇತರ ಒಂಬತ್ತು ಶಾಸಕರು ಇಂದು ರಾಜಭವನಕ್ಕೆ ಭೇಟಿ ನೀಡಿ, ಸರ್ಕಾರ ರಚನೆ ಕುರಿತು ರಾಜ್ಯಪಾಲರೊಂದಿಗೆ ಚರ್ಚಿಸಿದರು.

"ಜನರ ಇಚ್ಛೆಯಂತೆ ಹೊಸ ಸರ್ಕಾರ ರಚಿಸಲು ಬಿಜೆಪಿ ಸಿದ್ಧವಿದೆ. ಇದಕ್ಕೆ ನಲವತ್ತನಾಲ್ಕು ಶಾಸಕರ ಬೆಂಬಲ ಇದೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಸರ್ಕಾರ ರಚನೆಯ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ" ಎಂದು ಸಿಂಗ್ ತಿಳಿಸಿದ್ದಾರೆ.

"ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ" ಎಂದು ಅವರು ಹೇಳಿದರು.

ನೀವು ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

"ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮ ಎಂದ ಅವರು, ಸ್ಪೀಕರ್ ಟಿ. ಸತ್ಯಬ್ರತ ಅವರು ವೈಯಕ್ತಿಕವಾಗಿ ಮತ್ತು ಎಲ್ಲಾ 44 ಶಾಸಕರನ್ನು ಒಟ್ಟಿಗೆ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ಯಾರೂ ವಿರೋಧಿಸಿಲ್ಲ" ಎಂದು ಸಿಂಗ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.