ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ನಿಲ್ಲಲ್ಲ, ನಮಗೆ ಹಾನಿ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು: ಅಮಿತ್ ಶಾ
ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.

ಪೂಂಚ್/ಜಮ್ಮು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2014ರಲ್ಲಿ ಪ್ರಾರಂಭವಾದ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಇತ್ತೀಚಿನ ಪ್ರಚೋದನೆಗಳ ಹೊರತಾಗಿಯೂ ನಿಲ್ಲುವುದಿಲ್ಲ ಅಥವಾ ನಿಧಾನವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರತಿಪಾದಿಸಿದ್ದಾರೆ.
ಭಾರತಕ್ಕೆ ಹಾನಿ ಮಾಡಲು ಪ್ರಯತ್ನಿಸುವವ ಯಾರೇ ಆದರೂ ಅಂತವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಗಡಿ ಜಿಲ್ಲೆ ಪೂಂಚ್‌ನಲ್ಲಿ ಮಾತನಾಡಿದ ಶಾ, ಇತ್ತೀಚಿನ ಘಟನೆಗಳಿಂದಾಗಿ ಅಭಿವೃದ್ಧಿಯಲ್ಲಿ ಉಂಟಾದ ವಿರಾಮವು ಕೇವಲ ಕ್ಷಣಿಕವಾಗಿದೆ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಗತಿ ಶೀಘ್ರದಲ್ಲೇ ತನ್ನ ವೇಗವನ್ನು ಮರಳಿ ಪಡೆಯುತ್ತದೆ ಎಂದು ಹೇಳಿದರು.
ಇತ್ತೀಚಿನ ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಹಿರಿಯ ಅಧಿಕಾರಿಯ ತ್ಯಾಗವನ್ನು ಗುರುತಿಸಿ, ಗೃಹ ಸಚಿವರು ಸಶಸ್ತ್ರ ಪಡೆಗಳು ಮತ್ತು ನಾಗರಿಕ ಆಡಳಿತದ ಧೈರ್ಯ ಮತ್ತು ಸನ್ನದ್ಧತೆಯನ್ನು ಶ್ಲಾಘಿಸಿದರು.
ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


