ದೇಶ

ಕಾನ್ಪುರ: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಚ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಚಕೇರಿ ವಿಮಾನ ನಿಲ್ದಾಣದಲ್ಲಿ ಶುಭಂ ಅವರ ಪತ್ನಿ ಅಶಾನ್ಯಾ ಮತ್ತು ಅವರ ಪೋಷಕರಾದ ಸಂಜಯ್ ದ್ವಿವೇದಿ ಮತ್ತು ಸೀಮಾ ದ್ವಿವೇದಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಕಾನ್ಪುರ: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಚ ಶುಭಂ ದ್ವಿವೇದಿ ಕುಟುಂಬ ಭೇಟಿಯಾದ ಪ್ರಧಾನಿ ಮೋದಿ
ಪ್ರಧಾನಿ ಮೋದಿ - ಶುಭಂ ದ್ವಿವೇದಿ
Published On :

ಕಾನ್ಪುರ: ಕಳೆದ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಜನರಲ್ಲಿ ಒಬ್ಬರಾದ ಶುಭಂ ದ್ವಿವೇದಿ ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿಯಾದರು.

ಪ್ರಧಾನಿ ಮೋದಿ ಅವರು ಇಂದು ಚಕೇರಿ ವಿಮಾನ ನಿಲ್ದಾಣದಲ್ಲಿ ಶುಭಂ ಅವರ ಪತ್ನಿ ಅಶಾನ್ಯಾ ಮತ್ತು ಅವರ ಪೋಷಕರಾದ ಸಂಜಯ್ ದ್ವಿವೇದಿ ಮತ್ತು ಸೀಮಾ ದ್ವಿವೇದಿ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಈ ವೇಳೆ ಪ್ರಧಾನಿ ಮೋದಿ ಶುಭಂ ದ್ವಿವೇದಿ ಸಾವಿಗೆ ಸಂತಾಪ ಸೂಚಿಸಿದ್ದು, ಉಗ್ರರು ಹೇಡಿತನದ ದಾಳಿ ನಡೆಸಿದ್ದಾರೆ, “ಇದು ಆರಂಭ ಮಾತ್ರ; ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮುಂದುವರಿಯುತ್ತದೆ” ಎಂದು ದ್ವಿವೇದಿ ಕುಟುಂಬಕ್ಕೆ ಪ್ರಧಾನಿ ಭರವಸೆ ನೀಡಿದರು.

ಪ್ರಧಾನಿ ಮೋದಿ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶಾನ್ಯಾ ದ್ವಿವೇದಿ ಅವರು, ಆಪರೇಷನ್​ ಸಿಂಧೂರ್​ ಜೊತೆ ನಮಗೆ ವೈಯಕ್ತಿಕವಾಗಿ ಸಂಬಂಧವಿದೆ ಅನಿಸುತ್ತಿದೆ, ‘ಪ್ರಧಾನಿ ನರೇಂದ್ರ ಮೋದಿ ನಮ್ಮ ಕುಟುಂಬ ಸದಸ್ಯರಂತೆ ಮಾತನಾಡಿದರು. ದುರಂತದ ಬಗ್ಗೆ ಮಾತನಾಡುವಾಗ ಅವರು ಭಾವುಕರಾದರು ಎಂದು ಹೇಳಿದರು.

ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿರುವ ಆಪರೇಷನ್​ ಸಿಂಧೂರ್​ ಬಗ್ಗೆಯೂ ಮೋದಿ ಚರ್ಚಿಸಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.