ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ POK ಭಾರತದ ಭಾಗವಾಗಲಿದೆ: ಪ್ರಮೋದ್ ತಿವಾರಿ
ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಅವರು ಧೈರ್ಯಶಾಲಿ ಮತ್ತು ದೃಢನಿಶ್ಚಯದ ನಾಯಕ ಎಂದು ತಿವಾರಿ ಬಣ್ಣಿಸಿದ್ದಾರೆ.

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರಿಗೆ ಅಧಿಕಾರ ದೊರೆತ ದಿನವೇ ಪಾಕ್ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ತಿವಾರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಅವರು ಧೈರ್ಯಶಾಲಿ ಮತ್ತು ದೃಢನಿಶ್ಚಯದ ನಾಯಕ ಎಂದು ತಿವಾರಿ ಬಣ್ಣಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರದ ಬಗ್ಗೆ ಅವರ ಬದ್ಧತೆ ಗಮನಾರ್ಹವಾಗಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ಅವರ ಕೈಗೆ ಅಧಿಕಾರ ಹಾಗೂ ಭಾರತಕ್ಕಾಗಿ ನಿರ್ಧಾರಗಳನ್ನು ಕೈಗೊಳ್ಳುವ ಹಕ್ಕು ದೊರೆಯುವ ದಿನವೇ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ಅವರು ದೃಢ ನಿಶ್ಚಯ ಹೊಂದಿರುವ ವ್ಯಕ್ತಿಯಾಗಿರುವುದರಿಂದ ನನ್ನಲ್ಲಿ ಆ ನಂಬಿಕೆ ಇದೆ' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22ರಂದು ನಡೆಸಿದ ಗುಂಡಿನ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



