ದೇಶ

INDIA bloc ಅಧಿಕಾರಕ್ಕೆ ಬಂದರೆ ಬಿಹಾರ ರೈತರಿಗೆ ಬಂಪರ್ ಕೊಡುಗೆ: ತೇಜಸ್ವಿ ಯಾದವ್

ಬಿಹಾರದ 243 ಸದಸ್ಯ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ.

INDIA bloc ಅಧಿಕಾರಕ್ಕೆ ಬಂದರೆ ಬಿಹಾರ ರೈತರಿಗೆ ಬಂಪರ್ ಕೊಡುಗೆ: ತೇಜಸ್ವಿ ಯಾದವ್
ತೇಜಸ್ವಿ ಯಾದವ್
Published On :

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಇಂಡಿಯಾ ಬ್ಲಾಕ್‌ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ (MSP) ಗಿಂತ ಪ್ರತಿ ಕ್ವಿಂಟಾಲ್‌ಗೆ ಭತ್ತಕ್ಕೆ 300 ರೂಪಾಯಿ ಮತ್ತು ಗೋಧಿಗೆ 400 ರೂಪಾಯಿ ಬೋನಸ್ ನೀಡಲಾಗುವುದು ಎಂದು ಬಿಹಾರದ ಆರ್‌ಜೆಡಿ ನಾಯಕ ಮತ್ತು ಇಂಡಿಯಾ ಬ್ಲಾಕ್‌ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.

ಬಿಹಾರ ವಿಧಾನಸಭೆಯ ಮೊದಲ ಹಂತದ ಮತದಾನಕ್ಕೆ ಇನ್ನು ಎರಡು ದಿನ ಬಾಕಿ ಉಳಿದಿದ್ದು, ಅದಕ್ಕೆ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಎಲ್ಲಾ ಪ್ರಾಥಮಿಕ ಕೃಷಿ ಸಾಲ ಸಂಘಗಳು (PACS) ಮತ್ತು ಪ್ರಾಥಮಿಕ ಮಾರುಕಟ್ಟೆ ಸಹಕಾರ ಸಂಘಗಳ (Vyapar Mandals) ಮುಖ್ಯಸ್ಥರಿಗೆ "ಜನಪ್ರತಿನಿಧಿಗಳ ಸ್ಥಾನಮಾನ ನೀಡಲಾಗುವುದು ಎಂದು ಹೇಳಿದರು.

ಪ್ರತಿಯೊಬ್ಬ ರೈತನಿಗೆ ಕನಿಷ್ಠ ಬೆಂಬಲ ಬೆಲೆಗಿಂತ ಭತ್ತಕ್ಕೆ 300 ರೂಪಾಯಿ ಮತ್ತು ಗೋಧಿಗೆ 400 ರೂಪಾಯಿ ಹೆಚ್ಚು ಸಿಗುವಂತೆ ನಾವು ಖಚಿತಪಡಿಸುತ್ತೇವೆ. ಇದರೊಂದಿಗೆ, ರಾಜ್ಯದ 8,400 ನೋಂದಾಯಿತ ವ್ಯಾಪಾರ ಮಂಡಲಗಳು ಮತ್ತು ಪಿಎಸಿಎಸ್‌ಗಳ ವ್ಯವಸ್ಥಾಪಕರು ಗೌರವಧನವನ್ನು ಪಡೆಯುತ್ತಾರೆ ಎಂದರು.

ಬಿಹಾರದ 243 ಸದಸ್ಯ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.