ತಮಿಳುನಾಡು ವಿಧಾನಸಭಾ ಚುನಾವಣೆ 2026: ಸಿಎಂ ಅಭ್ಯರ್ಥಿಯಾಗಿ 'ವಿಜಯ್' ಹೆಸರಿಸಿದ TVK
ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಮಹಾಬಲಿಪುರಂ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಪಕ್ಷದ ಅಧ್ಯಕ್ಷ ನಟ ವಿಜಯ್ ದಳಪತಿ ನೇತೃತ್ವದಲ್ಲಿ ಇಂದು ಚೆನ್ನೈ ಬಳಿಯ ಮಹಾಬಲಿಪುರಂನ ಖಾಸಗಿ ಹೋಟೆಲ್ನಲ್ಲಿ ವಿಶೇಷ ಸಭೆ ನಡೆಯಿತು.
ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ವಿಧಾನಸಭಾ ಚುನಾವಣೆಗೆ ಮೈತ್ರಿಕೂಟವನ್ನು ನಿರ್ಧರಿಸಲು ಪಕ್ಷದ ಸಂಸ್ಥಾಪಕರಿಗೆ ಅಧಿಕಾರ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಎಲ್ಲಾ ವರ್ಗದ ಜನರಿಂದ ಪ್ರೀತಿಸಲ್ಪಡುವ ವಿಜಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಅವರ ನಾಯಕತ್ವದಲ್ಲಿ 2026 ರ ಚುನಾವಣೆಯನ್ನು ಎದುರಿಸಲಿದ್ದೇವೆ. ಚುನಾವಣಾ ಮೈತ್ರಿಕೂಟದ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.
ಸೆಪ್ಟೆಂಬರ್ 27 ರಂದು ಕರೂರ್ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 41 ಜನರಿಗೆ ಸದಸ್ಯರು ಎರಡು ನಿಮಿಷಗಳ ಮೌನ ಆಚರಿಸಿದರು. ಟಿವಿಕೆ ಪಕ್ಷದ ಕಾರ್ಯಕ್ರಮಗಳಲ್ಲಿ ವಿಜಯ್ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಪೊಲೀಸ್ ರಕ್ಷಣೆ ನೀಡಬೇಕೆಂದು ನಿರ್ಣಯವೊಂದರಲ್ಲಿ ಒತ್ತಾಯಿಸಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಲ್ಲಿಸುವಂತೆ ಪಕ್ಷ ಒತ್ತಾಯಿಸಿದೆ. ರಾಜ್ಯದಲ್ಲಿ ಪಕ್ಷದ ಬಗ್ಗೆ ಉತ್ತಮ ಪರಿಸ್ಥಿತಿಯಿದ್ದು, ಭವಿಷ್ಯದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿಜಯ್ ಸಭೆ ಕರೆದಿದ್ದರು.
ತಮಿಳುನಾಡಿನ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿವಿಕೆ ಘೋಷಿಸಿದ್ದು, ಆಡಳಿತಾರೂಢ ಡಿಎಂಕೆಯನ್ನು ವಿಜಯ್ ತೀವ್ರವಾಗಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



