Delhi airport: ವಾಯು ಸಂಚಾರ ನಿಯಂತ್ರಣದಲ್ಲಿ ತಾಂತ್ರಿಕ ಸಮಸ್ಯೆ; 100 ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ
ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (IGIA) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳ ಚಲನೆಯನ್ನು ನಿರ್ವಹಿಸುತ್ತದೆ.

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ 100 ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದ್ದು, ಅಧಿಕಾರಿಗಳು ಸಮಸ್ಯೆಗಳನ್ನು ಸರಿಪಡಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (IGIA) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳ ಚಲನೆಯನ್ನು ನಿರ್ವಹಿಸುತ್ತದೆ.
ನಿನ್ನೆ ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಾಯು ಸಂಚಾರ ನಿಯಂತ್ರಕರು ವಿಮಾನ ಯೋಜನೆಗಳನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ವಿಮಾನ ಯೋಜನೆಗಳನ್ನು ನೀಡುವ ಆಟೋ ಟ್ರ್ಯಾಕ್ ಸಿಸ್ಟಮ್ (AMS) ಗಾಗಿ ಮಾಹಿತಿಯನ್ನು ಒದಗಿಸುವ ಸ್ವಯಂಚಾಲಿತ ಸಂದೇಶ ಸ್ವಿಚಿಂಗ್ ಸಿಸ್ಟಮ್ (AMSS) ನಲ್ಲಿ ಕೆಲವು ಸಮಸ್ಯೆಗಳುಂಟಾದವು.
ಸಮಸ್ಯೆ ಮುಂದುವರಿದಿರುವುದರಿಂದ, ವಾಯು ಸಂಚಾರ ನಿಯಂತ್ರಕರು ಲಭ್ಯವಿರುವ ಡೇಟಾದೊಂದಿಗೆ ವಿಮಾನ ಯೋಜನೆಗಳನ್ನು ಹಸ್ತಚಾಲಿತವಾಗಿ ಸಿದ್ಧಪಡಿಸುತ್ತಿದ್ದಾರೆ, ಸಮಯ ತೆಗೆದುಕೊಳ್ಳುತ್ತಿದ್ದು, ಅನೇಕ ವಿಮಾನಗಳು ವಿಳಂಬವಾಗುತ್ತಿವೆ ಎಂದು ಮೂಲಗಳು ತಿಳಿಸಿವೆ.
ವಿಮಾನ ನಿಲ್ದಾಣದಲ್ಲಿ ವಾಯು ಸಂಚಾರ ದಟ್ಟಣೆಗೆ ಕಾರಣವಾಗುತ್ತಿವೆ. ಅಧಿಕಾರಿಗಳು ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ ಎಂದರು. ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ ಎಂದು ಮೂಲಗಳು ತಿಳಿಸಿವೆ.
ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24.com ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ನಿರ್ಗಮನಕ್ಕೆ ಸುಮಾರು 50 ನಿಮಿಷಗಳ ವಿಳಂಬವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


