Hyderabad: ಬ್ಲೈಂಡ್ ಸ್ಪಾಟ್ ಗೆ ಮತ್ತೊಂದು ಬಲಿ; ತಿರುವಿನಲ್ಲಿ ಬಾಲಕನ ಮೇಲೆ ಹರಿದ ಲಾರಿ! Video
ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ ನ ಮೈಲಾರದೇವಪಲ್ಲಿಯಲ್ಲಿ ಈ ಘಟನೆ ನಡೆದಿದ್ದು ಸ್ನೇಹಿತರೊಂದಿಗೆ ತೆರಳುತ್ತಿದ್ದ ಬಾಲಕನ ಮೇಲೆ ಮರಳು ಸಾಗಾಣಿಕಾ ಲಾರಿ ಹರಿದಿದೆ. ಈ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು 8 ವರ್ಷದ ಸೈಯದ್ ರಿಯಾನುದ್ದೀನ್ ಎಂದು ಹೇಳಲಾಗಿದ್ದು, ಇಲ್ಲಿನ ಶಾಸ್ತ್ರಿಪುರಂನಲ್ಲಿ ಬಾಲಕ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ತಿರುವಿನಲ್ಲಿ ಲಾರಿ ಹರಿದು ಬಾಲಕ ಮೃತಪಟ್ಟಿದ್ದಾನೆ.
ಬಾಲಕ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಹಠಾತ್ತನೆ ಯು-ಟರ್ನ್ ತೆಗೆದುಕೊಂಡಿದೆ. ಈ ವೇಳೆ ಬಾಲಕ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


