Delhi blast: ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್; ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ!
ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ ಟೆಸ್ಟ್ಗೆ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನ ತಡೆಯಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಕೋಲ್ಕತ್ತಾ: ದೆಹಲಿಯ ಸ್ಪೋಟ ಹಿನ್ನೆಲೆಯಲ್ಲಿ ಈ ವಾರ ಈಡನ್ ಗಾರ್ಡನ್ ನಲ್ಲಿ ಪ್ರಾರಂಭವಾಗಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕಾಗಿ ಕೋಲ್ಕತ್ತಾ, ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.
ಹೆಚ್ಚಿನ ನಿಗಾವಣೆಯ ನಡುವೆ ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ವರ್ಮಾ ಮಂಗಳವಾರ ವಿವಿಧ ಹಂತದ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದರು. 25 ನಿಮಿಷ ನಡೆದ ಸಭೆಯಲ್ಲಿ ನಗರದಾದ್ಯಂತ ಭದ್ರತಾ ಕ್ರಮಗಳನ್ನು ಬಲಪಡಿಸುವ ಮತ್ತು ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜುಗೊಳ್ಳುವತ್ತ ಕೇಂದ್ರೀಕರಿಸಲಾಗಿತ್ತು.
ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ ಟೆಸ್ಟ್ಗೆ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನ ತಡೆಯಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು.
ಪೊಲೀಸರು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ನಿನ್ನೆ ಮತ್ತು ಇಂದು ಮತ್ತೆ ಸಭೆಗಳನ್ನು ನಡೆಸಿದ್ದೇವೆ. ಕ್ರೀಡಾಂಗಣ, ಉಭಯ ತಂಡಗಳು ಮತ್ತು ಅವರ ನಿರ್ವಹಣೆಗೆ ಸಾಕಷ್ಟು ಭದ್ರತೆ ಏರ್ಪಡಿಸಲಾಗಿದೆ. ಯಾವುದೇ ಸಮಸ್ಯೆಗಳಿಲ್ಲ ಎಂದು ವರ್ಮಾ ಸುದ್ದಿಗಾರರಿಗೆ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ತೆರಳಿದ ಆಯುಕ್ತರು ಪರಿಶೀಲನೆ ನಡೆಸಿದರು. ಬಹು ನಿರೀಕ್ಷಿತ ಟೆಸ್ಟ್ ಪಂದ್ಯಕ್ಕೂ ಮುನ್ನ ಟಿಕೆಟ್ ಕೌಂಟರ್ಗಳ ಹೊರಗೆ ದೀರ್ಘ ಸರತಿ ಸಾಲುಗಳು ಕಂಡುಬಂದವು.
ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಎಲ್ಲಾ ಟಿಕೆಟ್ ಮಾರಾಟ ಕೇಂದ್ರಗಳಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕ್ರೀಡಾಂಗಣದ ಸುತ್ತಲೂ ಗಸ್ತು ತಿರುಗುವಿಕೆಯನ್ನು ಸಹ ತೀವ್ರಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



