Hyderabad: ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ! ಯಾಕೆ ಗೊತ್ತಾ?
ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು.

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್ ಕ್ಷಮೆಯಾಚಿಸಿದ್ದಾರೆ. ಬೆಟ್ಟಿಂಗ್ ವೇದಿಕೆಗಳಲ್ಲಿ ಆರ್ಥಿಕ ನಷ್ಟದಿಂದಾಗಿ ಹಲವಾರು ಯುವಕರು ತಮ್ಮ ಪ್ರಾಣವನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪದ ನಂತರ ಬೆಟ್ಟಿಗೆ ಆ್ಯಪ್ ಗೆ ಬೆಂಬಲ ನೀಡಿದ್ದಕ್ಕಾಗಿ ಅವರು ಕ್ಷಮೆ ಕೋರಿದ್ದಾರೆ.
ಬೆಟ್ಟಿಂಗ್ ಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಅಪರಾಧ ತನಿಖಾ ಇಲಾಖೆ (CID) ಮುಂದೆ ಬುಧವಾರ ವಿಚಾರಣೆಗೆ ಹಾಜರಾದ ಪ್ರಕಾಶ್ ರಾಜ್ , ತಮ್ಮ ಹೇಳಿಕೆಯನ್ನು ದಾಖಲಿಸಿದರು. ನಟರಾದ ದಗ್ಗುಬಾಟ್ಟಿ ರಾಣಾ ಮತ್ತು ಮಂಚು ಲಕ್ಷ್ಮಿ ಸೇರಿದಂತೆ ಹಲವಾರು ಆರೋಪಿಗಳಲ್ಲಿ ಪ್ರಕಾಶ್ ರಾಜ್ ಕೂಡಾ ಒಬ್ಬರಾಗಿದ್ದಾರೆ.
ನಾನು 2016 ರಲ್ಲಿ ಗೇಮಿಂಗ್ ಆ್ಯಪ್ ಅನ್ನು ಪ್ರಚಾರ ಮಾಡಿದ್ದೆ. ಆ ಆ್ಯಪ್ 2017 ರಲ್ಲಿ ಬೆಟ್ಟಿಂಗ್ ಆ್ಯಪ್ ಆಗಿ ರೂಪಾಂತರಗೊಂಡಿತು. ನಂತರ ನನ್ನ ಒಪ್ಪಂದವನ್ನು ರದ್ದುಗೊಳಿಸಿದೆ. ನಾನು ಅದನ್ನು ತಿಳಿದೋ ಅಥವಾ ತಿಳಿಯದೆಯೋ ಮಾಡಿದ್ದೇನೆ. ಆದರೂ ತಪ್ಪಾಗಿದೆ. ಆದ್ದರಿಂದ ನಾನು ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು.
ಬೆಟ್ಟಿಂಗ್ ಆ್ಯಪ್ಗಳು ಮತ್ತು ಗೇಮಿಂಗ್ ಆ್ಯಪ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅನೇಕ ಯುವಕರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬಳಲುತ್ತಿವೆ. ಕಠಿಣ ಪರಿಶ್ರಮ ಮಾತ್ರ ಫಲ ನೀಡುತ್ತದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಬರುತ್ತದೆ. ಆದ್ದರಿಂದ ನಾವೆಲ್ಲರೂ ದುಡಿಯೋಣ. ದಯವಿಟ್ಟು ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿ. ಭವಿಷ್ಯದಲ್ಲಿ ನಾನು ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಪ್ರಕಾಶ್ ರಾಜ್ ಹೇಳಿದರು.
ಲಕ್ಡಿಕಾಪುಲ್‌ನಲ್ಲಿರುವ ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದು, ತಮ್ಮ ಬ್ಯಾಂಕ್ ವಿವರಗಳನ್ನು ಒದಗಿಸಿರುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



