Delhi: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ! ಬೆಚ್ಚಿ ಬಿದ್ದ ಜನತೆ, ಅಷ್ಟಕ್ಕೂ ಆದದ್ದು ಏನು?
ನೈಋತ್ಯ ದೆಹಲಿಯ ಮಹಿಪಾಲ್‌ಪುರ ಪ್ರದೇಶದಲ್ಲಿ ಬಸ್ ಟೈರ್ ಸ್ಫೋಟದಿಂದ ಉಂಟಾದ ಪ್ರಬಲ ಶಬ್ದಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ.

ನವದೆಹಲಿ: ಐತಿಹಾಸಿಕ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಘಟನೆಯಿಂದ ರಾಷ್ಟ್ರ ರಾಜಧಾನಿ ಜನರಲ್ಲಿ ಭೀತಿ ಆವರಿಸಿದ್ದು, ಪ್ರತಿದಿನ ಭಯದಲ್ಲಿಯೇ ಬದುಕು ಸಾಗಿಸುವಂತಾಗಿದೆ.
ಈ ಮಧ್ಯೆ ಗುರುವಾರ ಬೆಳಿಗ್ಗೆ ನೈಋತ್ಯ ದೆಹಲಿಯ ಮಹಿಪಾಲ್‌ಪುರ ಪ್ರದೇಶದಲ್ಲಿ ಬಸ್ ಟೈರ್ ಸ್ಫೋಟದಿಂದ ಉಂಟಾದ ಪ್ರಬಲ ಶಬ್ದಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ. ಮಹಿಪಾಲ್‌ಪುರದ ರಾಡಿಸನ್ ಹೋಟೆಲ್ ಬಳಿ ಬೆಳಿಗ್ಗೆ 9.19 ಕ್ಕೆ ಸ್ಫೋಟದಂತಹ ದೊಡ್ಡ ಶಬ್ದ ಕೇಳಿಬಂದಿದೆ.
ತದ ನಂತರ ದೆಹಲಿ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಲಾಗಿದ್ದು, ಮೂರು ವಾಹನಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸ್ಥಳದಲ್ಲಿ ಏನೂ ಸಿಗಲಿಲ್ಲ. ಕರೆ ಮಾಡಿದವರನ್ನು ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯಲ್ ಎಂದು ಹೇಳಿದರು.
ಗುರುಗ್ರಾಮ್‌ಗೆ ಹೋಗುತ್ತಿದ್ದಾಗ ದೊಡ್ಡ ಶಬ್ದ ಕೇಳಿಸಿತು ಎಂದು ಕರೆಮಾಡಿದಾತ ಹೇಳಿದ್ದಾನೆ. ಎಲ್ಲವನ್ನೂ ಪರಿಶೀಲಿಸಿದ್ದೇವೆ. ಆದರೆ ಏನೂ ಪತ್ತೆಯಾಗಿಲ್ಲ. ಸ್ಥಳೀಯರ ವಿಚಾರಣೆಯ ಸಮಯದಲ್ಲಿ, ಧೌಲಾ ಕುವಾನ್ ಕಡೆಗೆ ಹೋಗುತ್ತಿದ್ದ DTC ಬಸ್‌ನ ಹಿಂಭಾಗದ ಟೈರ್ ಸಿಡಿದಿದ್ದು, ಅದರಿಂದ ಶಬ್ದ ಬಂದಿದೆ ಎಂದು ಸಿಬ್ಬಂದಿಯೊಬ್ಬರು ನಮಗೆ ಮಾಹಿತಿ ನೀಡಿದರು ಎಂದು ಡಿಸಿಪಿ ಹೇಳಿದರು. ಪರಿಸ್ಥಿತಿ ಸಾಮಾನ್ಯವಾಗಿದ್ದು, ಆತಂಕಪಡಬೇಕಾಗಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



