ದೇಶ

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿ.ಕೆ ಶಿವಕುಮಾರ್

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ: ಡಿ.ಕೆ ಶಿವಕುಮಾರ್
ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ
Published On :

ನವದೆಹಲಿ: ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿಯ ಬದಲು ಸಚಿವ ಸಂಪುಟ ಪುನಾರಚನೆ ಬಗ್ಗೆ ಈಗ ತೀವ್ರ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಬ್ಬರೂ ದೆಹಲಿಯಲ್ಲಿದ್ದಾರೆ.

ದೆಹಲಿಯಲ್ಲಿ 'ದಿಲ್ ಸೇ ವಿತ್ ಕಪಿಲ್ ಸಿಬಲ್' ನ 100 ನೇ ಸಂಚಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ನಿನ್ನೆ ಭಾಗಿಯಾಗಿದ್ದರು. ಈ ಮಧ್ಯೆ ನಿನ್ನೆ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಹಳ ಹೊತ್ತು ಚರ್ಚಿಸಿದ್ದಾರೆ. ಹೊರಗೆ ಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಿಎಂ, ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯೇ ಆಗಿಲ್ಲ, ಬಿಹಾರ ಎಲೆಕ್ಷನ್ ಫಲಿತಾಂಶ ಬಗ್ಗೆ ಮಾತ್ರ ಚರ್ಚೆ ಮಾಡಿದೆವು ಎಂದಿದ್ದಾರೆ.

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಅವರು, ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯನವರ ಭೇಟಿ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ವಿಚಾರಕ್ಕೆ ಭೇಟಿಯಾಗಿದ್ದರು, ಏನು ಚರ್ಚೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದಿದ್ದಾರೆ.

ಸಾಮಾನ್ಯವಾಗಿ ಸಿಎಂ ಬಂದಾಗ ಪಕ್ಷದ ವರಿಷ್ಠರನ್ನು ಭೇಟಿಯಾಗುವುದು ಸಹಜ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಏನಾದರೂ ಇದ್ದರೆ ಸಿಎಂ ಹತ್ತಿರ ಮಾತನಾಡಿ. ಪಕ್ಷ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುವುದು ನನ್ನ ಕೆಲಸ. ಪಕ್ಷದ ಹೈಕಮಾಂಡ್‌ ನನ್ನ ಕೇಳ್ತಾರೆ, ಆಗ ನಾನು ಮಾತನಾಡುತ್ತೇನೆ. ಏನು ಮಾತಾಡಬೇಕೆಂದು ನನಗೆ ಗೊತ್ತು ಎಂದು ದೆಹಲಿಯಲ್ಲಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಅವರನ್ನು ಸಿಎಂ ಭೇಟಿ ಮಾಡಿದರೆ ತಪ್ಪೇನು, ಅವರು ಯಾರನ್ನೂ ಬೇಕಾದರೆ ಭೇಟಿ ಮಾಡುವ ಅಧಿಕಾರ ಅವರಿಗಿದೆ, ನಾನು ಭೇಟಿ ಮಾಡಿದರೆ ಏನು ಕೇಳುತ್ತಾರೆ ಎಂದು ನನಗೆ ಗೊತ್ತಿದೆ, ಅದಕ್ಕೆ ನಾನು ಉತ್ತರ ಕೊಡುತ್ತೇನೆ ಎಂದಷ್ಟೇ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.