ಸೌದಿಯಲ್ಲಿ ಭೀಕರ ಬಸ್ ಅಪಘಾತ: ಪ್ರಧಾನಿ ಮೋದಿ ತೀವ್ರ ಸಂತಾಪ
ಮದೀನಾದಲ್ಲಿ ಸಂಭವಿಸಿರುವ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ.

ನವದೆಹಲಿ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 42 ಮಂದಿ ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮದೀನಾದಲ್ಲಿ ಸಂಭವಿಸಿರುವ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜಿದ್ದಾದ ರಾಯಭಾರಿ ಕಚೇರಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆಂದು ತಿಳಿಸಿದ್ದಾರೆ.
ಬಸ್ ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಮುಫ್ರಿಹಾತ್ ಬಳಿ ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ದುರ್ಘಟವೆ ವೇಳೆ ಬಸ್ ನಲ್ಲಿ ಒಟ್ಟು ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 43 ಮಂದಿ ಇದ್ದರು ಎನ್ನಲಾಗಿದ್ದು, 42 ಮಂದಿ ಸಜೀವ ದಹನವಗಿದ್ದರೆ, ಓರ್ವ ವ್ಯಕ್ತಿ ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೌದಿಯಲ್ಲಿ ಬಸ್-ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


