ದೇಶ

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!

ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!
ರಾಬರ್ಟ್ ವಾದ್ರಾ
Published On :

ಇಂದೋರ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸಾಮಾನ್ಯ ಒಕ್ಕೂಟ ಭರ್ಜರಿ ಬಹುಮತ ಗಳಿಸಿ ಅಧಿಕಾರ ಉಳಿಸಿಕೊಂಡ ಬೆನ್ನಲ್ಲೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ರಾಜ್ಯದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.

ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ. ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪುಗಳನ್ನು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ ಎಂದು ವಾದ್ರಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.

ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.