Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ
ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ದೊಡ್ಡ ಪ್ರಮಾಣದ ಕಲ್ಲಿದ್ದಲು ಮಾಫಿಯಾ ನಡೆದಿದ್ದು, ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೆಳಿಗ್ಗೆ 6 ಗಂಟೆ ಸುಮಾರಿಗೆ ನಡೆದ ದಾಳಿಯಲ್ಲಿ ಫೆಡರಲ್ ತನಿಖಾ ಸಂಸ್ಥೆಯ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಪ್ರಕರಣ ಸಂಬಂಧ ಅನಿಲ್ ಗೋಯಲ್, ಸಂಜಯ್ ಉದ್ಯೋಗ್, ಎಲ್‌ಬಿ ಸಿಂಗ್ ಮತ್ತು ಅಮರ್ ಮಂಡಲ್‌ಗೆ ಸಂಬಂಧಿಸಿದ ಪ್ರಕರಣಗಳೂ ಸೇರಿದ್ದು, ನರೇಂದ್ರ ಖಾರ್ಕಾ, ಅನಿಲ್ ಗೋಯಲ್, ಯುಧಿಷ್ಠೀರ್ ಘೋಷ್, ಕೃಷ್ಣ ಮುರಾರಿ ಕಾಯಲ್ ಮತ್ತು ಇತರರಿಗೆ ಸಂಬಂಧಿಸಿದ ಕಚೇರಿಗಳಲ್ಲೂ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



