ದೇಶ

ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.

ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಸಿಟಿವಿ ದೃಶ್ಯಾವಳಿ
Published On :

ಹೈದ್ರಾಬಾದ್: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಶುಕ್ರವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.

ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.

ಮಾನಸಿಕ ತೊಂದರೆಯಿಂದ ಬಳಲುತ್ತಿದ್ದ ಪಲ್ಲವಿ, ಗುರುವಾರ ಸಂಜೆ ತಮ್ಮ ಹಾಸ್ಟೆಲ್ ಕಟ್ಟಡದಿಂದ ಜಿಗಿದಿದ್ದಾಳೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆಕೆ ಹಾಸ್ಟೆಲ್ ಕಟ್ಟಡದಿಂದ ಜಿಗಿದಿರುವುದು ಕಂಡುಬಂದಿದೆ. ತದನಂತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಲ್ಲವಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಶುಕ್ರವಾರ ಬೆಳಿಗ್ಗೆ ಅವರು ಗಾಯಗಳಿಂದಾಗಿ ನಿಧನರಾಗಿದ್ದಾರೆ.

ಸಂತ್ರಸ್ತೆ ಪಲ್ಲವಿ ಸಾವಿಗೆ ಕಾಲೇಜು ಸಿಬ್ಬಂದಿಯೇ ಕಾರಣ ಎಂದು ಆಕೆಯ ಕುಟುಂಬ ಆರೋಪಿಸಿದೆ. ಮೇಲ್ವಿಚಾರಣೆ ಮತ್ತು ಬೆಂಬಲದ ಕೊರತೆ ಎಂದು ಆರೋಪಿಸಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಈ ಘಟನೆಯು ಕಾಲೇಜು ಆವರಣದಲ್ಲಿನ ಇತರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಆಘಾತ ಮತ್ತು ಭೀತಿಯನ್ನು ಉಂಟುಮಾಡಿದ್ದು, ಹಾಸ್ಟೆಲ್‌ಗಳಲ್ಲಿನ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪೋಷಕರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.