ಡಿಸೆಂಬರ್ 4 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್.4 ಮತ್ತು 5ರಂದು ಎರಡು ದಿನಗಳ ಪ್ರವಾಸವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ಮಾಹಿತಿ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.
ಡಿಸೆಂಬರ್ 5ರಂದು ನಡೆಯುವ 23ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಹಾಗೂ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳಿವೆ.
ಪುಟಿನ್ ಮತ್ತು ಮೋದಿ ಅವರ ನಡುವಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಎರಡು ದೇಶಗಳ ಸಂಬಂಧಗಳು ಮತ್ತು ಜಾಗತಿಕ ವಿಷಯಗಳ ಬಗ್ಗೆ ಆಳವಾದ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.
ಕಳೆದ ವರ್ಷದ ಜುಲೈನಲ್ಲಿ ಪ್ರಧಾನಿ ಮೋದಿಯವರು ಮಾಸ್ಕೋಗೆ ಭೇಟಿ ನೀಡಿದ್ದರು. ಈ ವೇಳೆ ಉಭಯ ರಾಷ್ಟ್ರಗಳ ನಡುವೆ ಶಕ್ತಿ ಸಹಕಾರ ಮತ್ತು ರಕ್ಷಣಾ ತಂತ್ರಜ್ಞಾನಗಳ ಬಗ್ಗೆ ಒಪ್ಪಂದಗಳಾಗಿವೆ.
ಸದ್ಯ ಜಾಗತಿಕ ರಾಜಕೀಯ ಒತ್ತಡಗಳು ಮತ್ತು ಮಾರ್ಗಸೂಚಿಗಳ ನಡುವೆ, ರಷ್ಯಾ ತೈಲ ಆಮದುಗಳಿಗೆ ಸಂಬಂಧಿಸಿದ ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕಗಳನ್ನು ಎದುರಿಸುತ್ತಿರುವಾಗ ಈ ಭೇಟಿ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



