Karur stampede: ತಮಿಳುನಾಡಿನಾದ್ಯಂತ ಯೋಜಿಸಿದ್ದ ಟಿವಿಕೆಯ ಎಲ್ಲ ಸಾರ್ವಜನಿಕ ಸಭೆಗಳು ಮುಂದೂಡಿಕೆ!
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರ ಪಕ್ಷವೂ ರಾಜ್ಯಾದ್ಯಂತ ಪ್ರಚಾರವನ್ನು ಆರಂಭಿಸಿತ್ತು.

ಚೆನ್ನೈ: ಕರೂರು ಕಾಲ್ತುಳಿತ ಪ್ರಕರಣದ ನಂತರ ತಮಿಳುನಾಡಿನಾದ್ಯಂತ ಯೋಜಿಸಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ಬುಧವಾರ ಘೋಷಿಸಿದೆ.
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರು ರಾಜ್ಯಾದ್ಯಂತ ಪ್ರವಾಸ ಕಾರ್ಯಕ್ರಮವನ್ನು ಆರಂಭಿಸಿದ್ದರು. ಜನರನ್ನು ಭೇಟಿ ಮಾಡಲು ಹಲವು ಕಡೆಗಳಲ್ಲಿ ರ್ಯಾಲಿ ನಡೆಸಲು ಉದ್ದೇಶಿಸಿದ್ದರು. ಇಲ್ಲಿಯವರೆಗೂತಿರುಚಿರಾಪಳ್ಳಿ, ನಾಮಕ್ಕಲ್ ಮತ್ತು ಕರೂರಿಗೆ ಭೇಟಿ ನೀಡಿದ್ದಾರೆ.
ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ಟಿವಿಕೆ ರ್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ41 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಕುಟುಂಬಗಳಿಗೆ ಟಿವಿಕೆ ಪಕ್ಷ ತಲಾ ರೂ.20 ಲಕ್ಷ ಪರಿಹಾರ ಘೋಷಿಸಿತ್ತು. ಈ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರ ಯೋಜಿಸಲಾಗಿದ್ದ ಸಾರ್ವಜನಿಕ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ನಮ್ಮ 41 ಸಹೋದರನ್ನು ಕಳೆದುಕೊಂಡಿದ್ದಕ್ಕೆ ನಾವು ದು:ಖ ಮತ್ತು ವಿಷಾದದಲ್ಲಿದ್ದೇವೆ. ಈ ಪರಿಸ್ಥಿತಿಯಲ್ಲಿ ನಮ್ಮ ನಾಯಕ ವಿಜಯ್ ಅವರ ಮುಂದಿನ ಎರಡು ವಾರಗಳ ಜನರ ಭೇಟಿ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗುತ್ತಿದೆ. ಇವುಗಳ ಪರಿಷ್ಕೃತ ವಿವರಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಟಿವಿಕೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



