ದೇಶ

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟ!

ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು ನ.14ಕ್ಕೆ ಫಲಿತಾಂಶ ಹೊರಬೀಳಲಿದೆ.

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನವೆಂಬರ್ 14ಕ್ಕೆ ಫಲಿತಾಂಶ ಪ್ರಕಟ!
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್
Published On :

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆದರೇ ನವೆಂಬರ್ 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು ನ.14ಕ್ಕೆ ಫಲಿತಾಂಶ ಹೊರಬೀಳಲಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ದಿನಾಂಕ ಘೋಷಿಸಿದರು. 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.