ಮತ್ತೊಂದು ಪೈಶಾಚಿಕ ಕೃತ್ಯ: MBBS ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, Video ರೆಕಾರ್ಡ್!
ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ವರದಿಯಾಗಿದ್ದು, ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ವೆಸಗಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ.
ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಘಟನೆ ಸೆಪ್ಟೆಂಬರ್ 9 ರಂದು ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ಈಗಾಗಲೇ ಸಂತ್ರಸ್ಥ ಯುವತಿ ಪೊಲೀಸ್ ದೂರು ನೀಡಿದ್ದಾರೆ. ಯುವತಿ ತನ್ನ ದೂರಿನಲ್ಲಿ, ಆರೋಪಿ - ಸಹ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಸ್ನೇಹದ ನೆಪದಲ್ಲಿ ಹೊಟೆಲ್ ಗೆ ಕರೆದೊಯ್ದು, ಅಲ್ಲಿ ನನಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರವೆಸಗಿದ್ದಾನೆ.
ಅಲ್ಲದೆ ತನ್ನ ದುಷ್ಕೃತ್ಯವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಫೋಟೋಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ಥ ಯುವತಿ ಆರೋಪಿಸಿದ್ದಾರೆ.
ಬೆದರಿಕೆ
ಅಲ್ಲದೆ ದುಷ್ಕರ್ಮಿ ತನ್ನ ಕೃತ್ಯವನ್ನು ಬಹಿರಂಗ ಪಡಿಸಿದರೆ ಅಥವಾ ದೂರು ನೀಡಿದರೆ, ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ಥ ಮಹಿಳೆ ಹರಿಯಾಣದ ಜಿಂದ್ ನಿವಾಸಿಯಾಗಿದ್ದು, ದೆಹಲಿಯ ರೋಹಿಣಿಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



