ದೇಶ

ಒಡಿಶಾ: ಬಿಜೆಪಿ ನಾಯಕ ಪಿತವಾಸ್ ಪಾಂಡ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ

ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಾಂಡ ಅವರ ಮನೆಯ ಬಳಿ ಬಂದು ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಒಡಿಶಾ: ಬಿಜೆಪಿ ನಾಯಕ ಪಿತವಾಸ್ ಪಾಂಡ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿ
ಒಡಿಶಾ ಬಿಜೆಪಿ ನಾಯಕನ ಹತ್ಯೆ
Published On :

ಒಡಿಶಾದ ಬೆರ್ಹಾಂಪುರದಲ್ಲಿ ಕಳೆದ ರಾತ್ರಿ ಬಿಜೆಪಿ ನಾಯಕ ಪಿತವಾಸ್ ಪಾಂಡ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಬೆರ್ಹಾಂಪುರ ಎಸ್ಪಿ ಡಾ. ಸರವಣ ವಿವೇಕ್ ಎಂ ಹೇಳಿದ್ದಾರೆ. ತನಿಖೆ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿ ನಾಯಕ ಪಿತವಾಸ್ ಪಾಂಡ ಹಿರಿಯ ವಕೀಲರು ಮತ್ತು ಆರ್‌ಟಿಐ ಕಾರ್ಯಕರ್ತರಾಗಿದ್ದರು.

ನಡೆದ ಘಟನೆಯೇನು?

ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಾಂಡ ಅವರ ಮನೆಯ ಬಳಿ ಬಂದು ಅವರ ಮೇಲೆ ಗುಂಡು ಹಾರಿಸಿದರು. ತಕ್ಷಣ ಅವರನ್ನು ಬೆರ್ಹಾಂಪುರ್‌ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ದಾಳಿಕೋರರನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ದಾಳಿಯ ಬಗ್ಗೆ ಪ್ರತಿಪಕ್ಷಗಳು ತೀವ್ರ ಖಂಡಿಸಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.