Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ; ಅಧಿಕಾರಿಗಳ ದುಂಬಾಲು ಬಿದ್ದ ಪತಿ!
ಮಹಮೂದಾಬಾದ್ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್, "ಸರ್, ನನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಸರ್ಪವಾಗಿ ಬದಲಾಗಿ ನನ್ನನ್ನು ಕಚ್ಚಲು ಓಡಾಡಿಸುತ್ತಾಳೆ ಎಂದು ಹೇಳಿಕೊಂಡಿದ್ದಾರೆ.

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನ ಆಘಾತಕಾರಿ ಮಾತುಗಳು ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದೆ. ರಾತ್ರಿ ಹೊತ್ತಲ್ಲಿ ಹಾವಾಗಿ ಬದಲಾಗುವ ಪತ್ನಿ ಕಚ್ಚಲು ಓಡಾಡಿಸುತ್ತಾಳೆ ಎಂದು ಆತ ಹೇಳಿಕೊಂಡಿದ್ದಾನೆ.
ಸಾಮಾನ್ಯವಾಗಿ ಸಮಾಧಾನ್ ದಿವಸ್ (ಸಾರ್ವಜನಿಕ ಕುಂದುಕೊರತೆ ಆಲಿಸುವ ದಿನ) ನಿವಾಸಿಗಳು ವಿದ್ಯುತ್, ರಸ್ತೆ ಮತ್ತು ಪಡಿತರ ಚೀಟಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮುಂದೆ ಪ್ರಸ್ತಾಪಿಸುತ್ತಾರೆ.
ಆದರೆ ಮಹಮೂದಾಬಾದ್ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್, "ಸರ್, ನನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಸರ್ಪವಾಗಿ ಬದಲಾಗಿ ನನ್ನನ್ನು ಕಚ್ಚಲು ಓಡಾಡಿಸುತ್ತಾಳೆ ಎಂದು ಹೇಳಿಕೊಂಡಿದ್ದಾರೆ.
ಆಕೆ ಹಲವು ಬಾರಿ ನನ್ನನ್ನು ಕೊಲ್ಲಲು ಯತ್ನಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಪ್ರತಿ ಬಾರಿಯೂ ಸರಿಯಾದ ಸಮಯಕ್ಕೆ ಎಚ್ಚರಗೊಂಡು ಸಾವಿನಿಂದ ತಪ್ಪಿಸಿಕೊಂಡಿದ್ದೇನೆ. ನನ್ನ ಹೆಂಡತಿ ಮಾನಸಿಕವಾಗಿ ಹಿಂಸಿಸುತ್ತಾಳೆ. ನಾನು ಮಲಗಿರುವಾಗ ಯಾವಾಗಬೇಕಾದ್ರೂ ನನ್ನನ್ನು ಕೊಲ್ಲಬಹುದು" ಎಂದು ಅವರು ಹೇಳಿದ್ದಾರೆ. ಈ ಮಾತು ಕೇಳಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತ್ವರಿತಗತಿಯಲ್ಲಿ ಹರಡಿ ಸಖತ್ ವೈರಲ್ ಆಗುತ್ತಿದೆ. ಬಳಕೆದಾರರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.
ಆಕೆ ಎಲ್ಲಿಯೂ ನಾಗಮಣಿ ಇಟ್ಟಿರಬೇಕು ಎಂದು ನೆಟ್ಟಿಗರೊಬ್ಬರು ಕೇಳಿದ್ದರೆ, ಇನ್ನೊಬ್ಬರು ನೀನು ಕೂಡಾ ಹಾವು ಆಗು ಎಂದಿದ್ದಾರೆ. ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಉಪವಿಭಾಗಾಧಿಕಾರಿ ಹಾಗೂ ಪೊಲೀಸರಿಗೆ ಸೂಚಿಸಿದ್ದಾರೆ. ಇದು ಮಾನಸಿಕ ಕಿರುಕುಳದ ಸಂಭಾವ್ಯ ಪ್ರಕರಣ ಎಂದು ಪರಿಗಣಿಸಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಮುಸ್ಲಿಂ ಮಹಿಳೆಗೆ ಚಿಕಿತ್ಸೆ ನೀಡಲ್ಲ: ಯೋಗಿ ನಾಡಲ್ಲಿ ಹೊಸ ವಿವಾದ ಹುಟ್ಟುಹಾಕಿದ ಡಾಕ್ಟರ್! ಮುಂದಿನ ಸಮಾಜದ ಗತಿ ಏನು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


