ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ: ನಾಲ್ವರು ಸಾವು, ಆರು ಮಂದಿಗೆ ಗಾಯ
ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಸರ್ವಿಸ್ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.
ದಬ್ರಾ ಪ್ರದೇಶದ ಉಚ್ಪಿಂಡಾ ಗ್ರಾಮದಲ್ಲಿರುವ ಆರ್‌ಕೆಎಂ ಪವರ್‌ಜೆನ್ ಪ್ರೈವೇಟ್ ಲಿಮಿಟೆಡ್‌ನ ಸೌಲಭ್ಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ವರಿಷ್ಠಾಧಿಕಾರಿ ಅಂಕಿತಾ ಶರ್ಮಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ತಮ್ಮ ಶಿಫ್ಟ್ ಮುಗಿಸಿ 10 ಕಾರ್ಮಿಕರು ಲಿಫ್ಟ್ ನಲ್ಲಿ ಇಳಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ ಎಂದು ಅಂಕಿತಾ ಶರ್ಮಾ ತಿಳಿಸಿದ್ದಾರೆ. ಅಲ್ಲಿದ್ದವರೆಲ್ಲ ಗಾಯಗೊಂಡಿದ್ದು, ಅವರನ್ನು ಹತ್ತಿರದ ರಾಯ್‌ಗಢದ ಜಿಂದಾಲ್ ಫೋರ್ಟಿಸ್ ಆಸ್ಪತ್ರೆಗೆ ಸಾಗಿಸಲಾಯಿತು. ನಾಲ್ವರು ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ.
ಉಳಿದ ಆರು ಮಂದಿಗೆ ಚಿಕಿತ್ಸೆ ಮುಂದುವರಿದಿದೆ. 2,000 ಕೆಜಿ ಲೋಡ್ ಸಾಮರ್ಥ್ಯದ ಲಿಫ್ಟ್, ಕೆಲವೇ ದಿನಗಳ ಹಿಂದೆ, ಸೆಪ್ಟೆಂಬರ್ 29 ರಂದು ನಿರ್ವಹಣೆಗೆ ಒಳಗಾಗಿತ್ತು ಎಂದು ತಿಳಿದುಬಂದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


