ಅಸ್ಸಾಂನ ಸ್ಥಳೀಯ ಸಮುದಾಯಗಳಿಗೆ ದ್ರೋಹ: ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ರಾಜೇನ್
ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ".

ದಿಬ್ರುಗಢ: ಮಾಜಿ ಕೇಂದ್ರ ಸಚಿವ ಮತ್ತು ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ರಾಜೇನ್ ಗೋಹೈನ್ ಅವರು ಗುರುವಾರ ಇತರ 17 ಸದಸ್ಯರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೇನ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಕೇಳಿಕೊಂಡಿದ್ದಾರೆ.
ರಾಜೇನ್ ಅವರೊಂದಿಗೆ ಅಸ್ಸಾಂನ ಹದಿನೇಳು ಇತರ ಬಿಜೆಪಿ ಸದಸ್ಯರು ಸಹ ದಿಲೀಪ್ ಸೈಕಿಯಾ ಅವರಿಗೆ ತಮ್ಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಿಟಿಐ ಜೊತೆ ಮಾತನಾಡಿದ ರಾಜೇನ್ ಗೊಹೈನ್, ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ" ಎಂದು ಆರೋಪಿಸಿದ್ದಾರೆ.
ರಾಜೇವ್ ಅವರು 1999 ರಿಂದ 2019 ರವರೆಗೆ ನಾಲ್ಕು ಅವಧಿಗೆ ನಾಗಾಂವ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು 2016 ರಿಂದ 2019 ರವರೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



