ದೇಶ

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ.

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral
ಅಯೋಧ್ಯೆಯಲ್ಲಿ ಮತ್ತೊಂದು ಸ್ಫೋಟ
Published On :

ಅಯೋಧ್ಯೆ: ಇತ್ತೀಚೆಗೆ ಸ್ಫೋಟದಿಂದಾಗಿ ಸುದ್ದಿಗೆ ಗ್ರಾಸವಾಗಿದ್ದ ಅಯೋಧ್ಯೆಯಲ್ಲಿ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಅಯೋಧ್ಯೆಯ ಹಳ್ಳಿಯೊಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ್ದ ಪ್ರಬಲ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೋರ್ವ ಮಹಿಳೆ ಶವ ಪತ್ತೆಯಾಗಿದೆ.

ಈ ಹಿಂದೆ ಇದೇ ಜಾಗದಲ್ಲಿ 5 ಮೃತದೇಹಗಳು ಪತ್ತೆಯಾಗಿದ್ದವು. ಆ ಮೂಲಕ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮತ್ತೊಂದು 'ನಿಗೂಢ' ಸ್ಫೋಟ

ಇನ್ನು ಅವಶೇಷ ತೆರವು ಕಾರ್ಯಾಚರಣೆ ವೇಳೆ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಕುಸಿತವಾಗಿದ್ದ ಗೋಡೆಗಳ ತೆರವು ಮಾಡುತ್ತಿದ್ದ ಜೆಸಿಬಿ ಕಾರ್ಯಾಚರಣೆ ವೇಳೆ ಮತ್ತೆ ಸ್ಫೋಟ ಸಂಭವಿಸಿದೆ. ಈ ವೇಳೆ ಜೆಸಿಬಿ ಚಾಲಕ ಭಯಭೀತನಾಗಿ ಜೆಸಿಬಿ ವಾಹನ ಬಿಟ್ಟು ಪರಾರಿಯಾಗಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಸರ್ಕಲ್ ಆಫೀಸರ್ (ಸಿಒ) ಶೈಲೇಂದ್ರ ಸಿಂಗ್ ಅವರು, 'ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅಗೆತದ ಯಂತ್ರಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಮೀಪದಲ್ಲಿದ್ದ ಮನೆಗಳನ್ನು ಸ್ಥಳಾಂತರಿಸಲಾಗಿದೆ' ಎಂದರು.

ಘಟನಾ ಸ್ಥಳದಿಂದ ದೂರವಿರುವಂತೆ ಮನವಿ

ಇದೇ ವೇಳೆ ರಕ್ಷಣಾ ಕಾರ್ಯಗಳಿಗೆ ಅನುಕೂಲವಾಗುವಂತೆ ಅಪಘಾತ ಸ್ಥಳದಿಂದ ದೂರ ಉಳಿಯುವಂತೆ ಅಧಿಕಾರಿಗಳು ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡುತ್ತಿದ್ದು, ಸ್ಫೋಟದ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಮಾಹಿತಿ ಪಡೆದಿದ್ದು, ಮೃತರ ಕುಟುಂಬಸ್ಥರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.