ದೇಶ

ದುರ್ಗಾಪುರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಇಬ್ಬರ ಬಂಧನ

"ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ. ಇದರೊಂದಿಗೆ ದೂರಿನ ಆಧಾರದ ಮೇಲೆ ಎಲ್ಲಾ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ".

ದುರ್ಗಾಪುರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :

ಬರ್ಧಮಾನ್: ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

"ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ. ಇದರೊಂದಿಗೆ ದೂರಿನ ಆಧಾರದ ಮೇಲೆ ಎಲ್ಲಾ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ" ಎಂದು ಅಸನ್ಸೋಲ್-ದುರ್ಗಾಪುರ ಪೊಲೀಸ್ ಕಮಿಷನರೇಟ್‌ನ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಅಭಿಶೇಖ್ ಗುಪ್ತಾ ಪಿಟಿಐಗೆ ತಿಳಿಸಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಮೂಲದ 23 ವರ್ಷದ ಯುವತಿ ಕಳೆದ ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ತಮ್ಮ ವೈದ್ಯಕೀಯ ಕಾಲೇಜಿನ ಹೊರಗೆ ಊಟಕ್ಕೆ ಹೋದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ವಿದ್ಯಾರ್ಥಿನಿ ಮೇಲೆ 'ಸಾಮೂಹಿಕ ಅತ್ಯಾಚಾರ'ದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಾನುವಾರ ಮೂವರನ್ನು ಬಂಧಿಸಲಾಗಿದ್ದು, ಇಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.