Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ECI
ಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗಿನಿಂದ ಹೆಸರು ಡಿಲೀಟ್ ಮಾಡುವುದರ ವಿರುದ್ಧ ಯಾವುದೇ ಮತದಾರರು ಒಂದೇ ಒಂದು ಮೇಲ್ಮನವಿ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ನವದೆಹಲಿ: ಬಿಹಾರ ಎಸ್‌ಐಆರ್ ಪ್ರಕ್ರಿಯೆ "ನಿಖರವಾಗಿದೆ" ಎಂದು ವಾದಿಸಿದ ಭಾರತೀಯ ಚುನಾವಣಾ ಆಯೋಗ(ಇಸಿಐ), ಅರ್ಜಿದಾರರ ರಾಜಕೀಯ ಪಕ್ಷಗಳು ಮತ್ತು ಎನ್‌ಜಿಒಗಳು ಈ ಪ್ರಕ್ರಿಯೆಗೆ ಕಳಂಕ ತರಲು ಬಯಸುತ್ತಿವೆ ಮತ್ತು "ಸುಳ್ಳು ಆರೋಪಗಳನ್ನು" ಮಾಡುತ್ತಿವೆ ಎಂದು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗಿನಿಂದ ಹೆಸರು ಡಿಲೀಟ್ ಮಾಡುವುದರ ವಿರುದ್ಧ ಯಾವುದೇ ಮತದಾರರು ಒಂದೇ ಒಂದು ಮೇಲ್ಮನವಿ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ರ್ಯಾಲಿಗಳ ಕಾರಣದಿಂದಾಗಿ ರಾಜಕೀಯ ಪಕ್ಷಗಳು ವಿಚಾರಣೆಗೆ ಗೈರುಹಾಜರಾಗಿರುವುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಯ ಅಂತಿಮ ಪಟ್ಟಿಯಲ್ಲಿ ಮುದ್ರಣ ದೋಷಗಳು ಮತ್ತು ಇತರ ತಪ್ಪುಗಳನ್ನು ಚುನಾವಣಾ ಆಯೋಗ ಜವಾಬ್ದಾರಿಯಿಂದ ಪರಿಶೀಲಿಸಿ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುವುದಾಗಿ ಹೇಳಿದೆ.
ಬಿಹಾರ SIR ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ವೇಳೆ, ಅರ್ಜಿದಾರರು "ಹಿಡನ್ ಅಜೆಂಡಾ" ಹೊಂದಿದ್ದಾರೆ ಮತ್ತು ರಾಜಕೀಯ ಪಕ್ಷಗಳ ಚುನಾವಣಾ ಹಿತಾಸಕ್ತಿಗಾಗಿ ECI ಅನ್ನು ಅಪಖ್ಯಾತಿಗೊಳಿಸಲು SIR ಪ್ರಕ್ರಿಯೆ ಹಾಗೂ ಅಂತಿಮ ಮತದಾರರ ಪಟ್ಟಿ ವಿರುದ್ಧ "ಸುಳ್ಳು ಆರೋಪಗಳನ್ನು" ಮಾಡುತ್ತಿದ್ದಾರೆ ಎಂದು EC ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



