ದೇಶ

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ   ಹೃದಯಾಘಾತದಿಂದ ನಿಧನ
ಶಿವಾಜಿ ಕಾರ್ಡಿಲೆ
Published On :

ಪುಣೆ: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಅವರಿಗೆ 66 ವರ್ಷ ವಯಸ್ಸಾಗಿತ್ತು. ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು, ಕಳೆದ ಕೆಲ ಸಮಯಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದರು. ಶಿವಾಜಿ ಕಾರ್ಡಿಲೆ ಅವರು, ಆರು ಬಾರಿ ಶಾಸಕರಾಗಿದ್ದಾರೆ. ಅದರಲ್ಲೂ ಐದು ಬಾರಿ ಸತತ ಗೆಲುವು ದಾಖಲಿಸಿದ್ದಾರೆ. 2019ರಲ್ಲಿ ಎನ್‌ಸಿಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. 2024ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾದರು.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಸೌಧ ಪ್ರವೇಶಿಸಿದ ಶಿವಾಜಿ ಅವರು ನಂತರ ಕಾಂಗ್ರೆಸ್‌ನಿಂದ ಹಾಗೂ ಅವಿಭಜಿತ ಎನ್‌ಸಿಪಿಯಿಂದಲೂ ಸ್ಪರ್ಧಿಸಿ ಶಾಸಕರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.