ದೇಶ

Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್, ಪ್ರತಿಭಟನೆ

ಬಿಜೆಪಿ ರಾಜ್ಯಸಭಾ ಸದಸ್ಯೆ ಮೇಧಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡರು.

Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್, ಪ್ರತಿಭಟನೆ
ಶನಿವಾರ ವಾಡಾ ಕೋಟೆಯಲ್ಲಿ ನಮಾಜ್ ಮಾಡುತ್ತಿರುವ ಮುಸ್ಲಿಂ ಮಹಿಳೆಯರ ಚಿತ್ರ
Published On :

ಪುಣೆ: ಮರಾಠ ಸಾಮ್ರಾಜ್ಯದ ಪ್ರಸಿದ್ಧ ಐತಿಹಾಸಿಕ ಕೋಟೆ ಶನಿವಾರ ವಾಡದಲ್ಲಿ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿಂದೂ ಪರ ಸಂಘಟನೆಗಳು ಭಾನುವಾರ ಪುಣೆಯಲ್ಲಿ ಪ್ರತಿಭಟನೆ ನಡೆಸಿದವು.

ಬಿಜೆಪಿ ರಾಜ್ಯಸಭಾ ಸದಸ್ಯೆ ಮೇಧಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೇಧಾ ಕುಲಕರ್ಣಿ, ಇದು ದುರದೃಷ್ಟಕರವಾಗಿದ್ದು, ಶನಿವಾರ ವಾಡಾ ನಮಾಜ್ ಮಾಡುವ ಸ್ಥಳವಲ್ಲ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಆಡಳಿತವನ್ನು ಒತ್ತಾಯಿಸುತ್ತೇವೆ" ಎಂದು ಹೇಳಿದರು.

ನಮಾಜ್ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಈ ವಿಚಾರದ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಾತಿತ್ ಪವನ್ ಸಂಘಟನಾ, ಹಿಂದೂ ಸಕಲ ಸಮಾಜ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಪ್ರತಿಭಟನಾಕಾರರು ಸ್ಥಳದಲ್ಲಿ ಗೋಮೂತ್ರವನ್ನು ಸಿಂಪಡಿಸಿದರು. ನಮಾಜ್ ನಡೆದ ಸ್ಥಳವನ್ನು ಶುದ್ದೀಕರಿಸುವ ಪ್ರಯತ್ನವಾಗಿ ಶಿವ ವಂದನಾ ಪ್ರಾರ್ಥನೆ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಉಪ ಪೊಲೀಸ್ ಆಯುಕ್ತ ಕೃಶಿಕೇಶ್ ರಾವಾಲೆ, ಈ ಸ್ಥಳವು ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಒಳಪಟ್ಟಿದೆ. ಎಎಸ್‌ಐ ಜೊತೆಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.