ನವಿ ಮುಂಬೈ: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ; ಆರು ವರ್ಷದ ಬಾಲಕ ಸೇರಿ ನಾಲ್ವರ ಸಾವು
ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ ಅವಘಡ ಸಂಭವಿಸಿದೆ.

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಆರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ ಅವಘಡ ಸಂಭವಿಸಿದೆ.
ಬೆಂಕಿಯಲ್ಲಿ ಮೂರು ಫ್ಲಾಟ್‌ಗಳು ಸುಟ್ಟುಹೋಗಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆ ಆರಂಭಿಸಲಾಗಿದೆ. ಮೃತರನ್ನು ವೈದಿಕ್ ಬಾಲಕೃಷ್ಣ (6), ಪೂಜಾ ರಾಜನ್ (39), ಸುಂದರ್ ಬಾಲಕೃಷ್ಣನ್ (46), ಮತ್ತು ಕಮಲ್ ಹೀರಾಲಾಲ್ ಜೈನ್ (84) ಎಂದು ಗುರುತಿಸಲಾಗಿದೆ.
10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 4 ಗಂಟೆ ಹೊತ್ತಿಗೆ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



