ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನವೆಂಬರ್ 4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪಾತ್ರ ವಹಿಸಿದ್ದಾನೆ. ಅಲ್ಲದೇ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅ.9 ರಂದು ಎಟಿಎಸ್ ಪುಣೆಯ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಭಯೋತ್ಪಾದಕ ಜಾಲದ ಸುಳಿವು ನೀಡುವ ಎಲೆಕ್ಟ್ರಾನಿಕ್ ಸಾಧನಗಳು, ದಾಖಲೆಗಳು ಮತ್ತು ವಸ್ತುಗಳನ್ನು ಪತ್ತೆಯಾಗಿದ್ದವು. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಕಳೆದ ವರ್ಷ 72 ದಾಳಿ ನಡೆದಿತ್ತು. ಈ ವರ್ಷ ಅದು ಈಗಾಗಲೇ 115 ದಾಳಿಗಳನ್ನು ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



