Delhi Airport: ವಿಮಾನದ ಸ್ವಲ್ಪ ದೂರದಲ್ಲೇ ಏರ್ ಇಂಡಿಯಾ ಶಟಲ್ ಬಸ್ ಗೆ ಬೆಂಕಿ! Video
ಬೆಂಕಿಯ ಕೆನ್ನಾಲಿಗೆ ವಿಮಾನಕ್ಕೆ ತಾಗಿದ್ದರೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿತ್ತು.

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಭಾರಿ ಅಗ್ನಿ ಅವಘಡವೊಂದು ನಡೆದಿದೆ. ಏರ್ ಇಂಡಿಯಾ ವಿಮಾನದಿಂದ ಕೆಲವೇ ಮೀಟರ್ ದೂರದಲ್ಲಿ ನಿಂತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಧಗ ಧಗನೆ ಹೊತ್ತಿ ಉರಿದಿದೆ.
SATS ಏರ್ಪೋರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನಿಂದ ನಿರ್ವಹಿಸಲ್ಪಡುವ ಬಸ್ ಬೇ 32 ರ ಬಳಿ ನಿಂತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದಿದೆ.
ಬೆಂಕಿಯ ಕೆನ್ನಾಲಿಗೆ ವಿಮಾನಕ್ಕೆ ತಾಗಿದ್ದರೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿತ್ತು. ಆದರೆ, ಅದೃಷ್ಟವಶಾತ್ ಬೆಂಕಿಯ ಕಿಡಿ ವಿಮಾನಕ್ಕೆ ತಾಗಿಲ್ಲ. ವಿಡಿಯೋದಲ್ಲಿ ಇಡೀ ಬಸ್ ಸುಟ್ಟು ಭಸ್ಮವಾಗಿರುವುದನ್ನು ನೋಡಬಹುದಾಗಿದೆ.
ಇದೊಂದು ಕಣ್ತಪ್ಪಿನಿಂದ ಆದ ಘಟನೆಯಾಗಿದ್ದು, ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ ತಜ್ಞ ಎಆರ್ಎಫ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದೆ. ಘಟನೆಯಲ್ಲಿ ಯಾವುದೇ ಅನಾಹುತ ಆಗಿಲ್ಲ, ಯಾರಿಗೂ ಗಾಯಗಳಾಗಿಲ್ಲ ಎಂದು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐಎ) ಕಾರ್ಯಾಚರಣೆಯನ್ನು ನಿರ್ವಹಿಸುವ ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



