ದೇಶ

Bihar Poll: ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ 'ಜನ್ ಸುರಾಜ್‌' ಪಕ್ಷದ ಬೆಂಬಲಿಗ ನಿಗೂಢ ಸಾವು!

ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Bihar Poll: ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ 'ಜನ್ ಸುರಾಜ್‌' ಪಕ್ಷದ ಬೆಂಬಲಿಗ ನಿಗೂಢ ಸಾವು!
ಬಿಹಾರ ಪೊಲೀಸರ ಸಾಂದರ್ಭಿಕ ಚಿತ್ರ
Published On :

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ 6 ದಿನ ಬಾಕಿಯಿರುವಂತೆಯೇ ಜನ್ ಸುರಾಜ್‌ ಪಕ್ಷದ ಬೆಂಬಲಿಗರೊಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಪಾಟ್ನಾದ ಮೊಕಾಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದುಲಾರ್ ಚಂದ್ ಯಾದವ್ ಎಂದು ಗುರುತಿಸಲಾಗಿದೆ. ಅವರು ಜನ್ ಸುರಾಜ್‌ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ಮಾಡುತ್ತಿದ್ದಾಗ ಸಾವನ್ನಪ್ಪಿದ್ದಾರೆ.

"ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಬುಲೆಟ್ ಗಾಯದಿಂದ ಸಾವನ್ನಪ್ಪಿದ್ದಾರೋ ಅಥವಾ ಆಕಸ್ಮಿಕ ಸಾವೋ ಎಂಬುದು ಪೊಲೀಸರು ಶವ ಪಡೆದ ನಂತರವೇ ತಿಳಿಯಬಹುದು" ಎಂದು ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕೇಯ ಕೆ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ಕ್ಷೇತ್ರದಲ್ಲಿ ಜೆಡಿಯು ನಿಂದ ಅನಂತ್ ಸಿಂಗ್ ಕಣಕ್ಕಿಳಿದಿದ್ದು, ವೀಣಾದೇವಿ RJD ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 6 ರಂದು ಮೊಕಾಮಾದಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.