'ದೇಶ ವಿರೋಧಿ ಚಟುವಟಿಕೆ': ಜಮ್ಮು, ಕಾಶ್ಮೀರದ ಇಬ್ಬರು ಸರ್ಕಾರಿ ನೌಕರರು ವಜಾ
ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿರುವ ಗುಲಾಮ್ ಹುಸೇನ್ ಮತ್ತು ಮಾಜ್ದ್ ಇಕ್ಬಾಲ್ ದಾರ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ವಜಾಗೊಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಾರತದ ಸಂವಿಧಾನದ 311ನೇ ವಿಧಿಯನ್ನು ಬಳಸಿ, ಇಬ್ಬರು ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿರುವ ಗುಲಾಮ್ ಹುಸೇನ್ ಮತ್ತು ಮಾಜ್ದ್ ಇಕ್ಬಾಲ್ ದಾರ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ವಜಾಗೊಳಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಪ್ರತಿಯೊಂದು ಪ್ರಕರಣದ ಸಂದರ್ಭಗಳನ್ನು ಪರಿಗಣಿಸಿ ಇಬ್ಬರು ಉದ್ಯೋಗಿಗಳ ವಜಾಗೊಳಿಸುವಿಕೆಯನ್ನು ಅನುಮೋದಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚುನಾಯಿತ ಸರ್ಕಾರವು ನೌಕರರನ್ನು ವಜಾಗೊಳಿಸುವುದನ್ನು ವಿರೋಧಿಸಿದ್ದರೂ ಸಹ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಈ ಇಬ್ಬರೂ ಸರ್ಕಾರಿ ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಿದ್ದಾರೆ.
ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸಿ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಇದುವರೆಗೆ 80ಕ್ಕೂ ಹೆಚ್ಚು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



