ಪ್ರವಾಹದಿಂದಾಗಿ ಮಣಿಮಹೇಶ್ ಯಾತ್ರೆಯ 16 ಭಕ್ತರು ಸಾವು: ಹಿಮಾಚಲ ವಿಪತ್ತು ಪೀಡಿತ ರಾಜ್ಯ; ಸಿಎಂ ಸುಖು ಘೋಷಣೆ!
ಹಿಮಾಚಲ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಹಾನಿಯಿಂದಾಗಿ 3,056 ಕೋಟಿ ರೂಪಾಯಿಯಷ್ಟು ಆಸ್ತಿ ನಷ್ಟ ಉಂಟಾಗಿದ್ದು ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯವೆಂದು ಘೋಷಿಸಿದ್ದಾರೆ.

ಚಂಡೀಗಢ: ಹಿಮಾಚಲ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಹಾನಿಯಿಂದಾಗಿ 3,056 ಕೋಟಿ ರೂಪಾಯಿಯಷ್ಟು ಆಸ್ತಿ ನಷ್ಟ ಉಂಟಾಗಿದ್ದು ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯವೆಂದು ಘೋಷಿಸಿದ್ದಾರೆ.
ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ವಿನಾಶದ ಪ್ರಮಾಣವನ್ನು ಉಲ್ಲೇಖಿಸಿ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದು ರಸ್ತೆಗಳು, ಸೇತುವೆಗಳು, ವಿದ್ಯುತ್ ಸಂಪರ್ಕ ಮತ್ತು ನೀರು ಸರಬರಾಜು ಯೋಜನೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಿಪತ್ತಿಗೆ ಹವಾಮಾನ ಬದಲಾವಣೆಯನ್ನು ದೂಷಿಸಿದ ಅವರು, ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇಂದಿನಿಂದ ಇಡೀ ರಾಜ್ಯವನ್ನು ವಿಪತ್ತು ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭಾರೀ ಮಳೆ, ಭೂಕುಸಿತ ಮತ್ತು ಪ್ರವಾಹದಿಂದಾಗಿ ಮಣಿಮಹೇಶ್ ಯಾತ್ರೆಗೆ ಅಡ್ಡಿಯುಂಟಾಗಿದ್ದು, ಕನಿಷ್ಠ 16 ಭಕ್ತರು ಸಾವನ್ನಪ್ಪಿದ್ದಾರೆ. ಮುಂದಿನ 2 ದಿನಗಳವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಧಾ ಅಷ್ಟಮಿಯಂದು ಮಣಿ ಮಹೇಶ್ ದಾಲ್ ಸರೋವರದಲ್ಲಿ ಸಾಂಪ್ರದಾಯಿಕ ರಾಜ ಸ್ನಾನ ಸಾಧ್ಯವಾಗಲಿಲ್ಲ. ಭಾರೀ ಮಳೆ ಮತ್ತು ನಿರಂತರ ಭೂಕುಸಿತಗಳಿಂದಾಗಿ ಈ ಸಂಪ್ರದಾಯವನ್ನು 84 ದೇವಾಲಯ ಸಂಕೀರ್ಣಗಳಲ್ಲಿ ಪೂರ್ಣಗೊಳಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



