ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ ತೋರಿಸಿದ್ದು, ಆತಂಕಗೊಂಡ ಪೈಲಟ್‌ಗಳು AI 2913ರ ಬಲ ಎಂಜಿನ್ ಅನ್ನು ಆಫ್ ಮಾಡಿದರು.

ನವದೆಹಲಿ: ಭಾನುವಾರ ಬೆಳಗ್ಗೆ ದೆಹಲಿಯಿಂದ ಇಂದೋರ್‌ಗೆ 94 ಪ್ರಯಾಣಿಕರೊಂದಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(IGIA) ವಾಪಸ್ ಬಂದು ತುರ್ತು ಲ್ಯಾಂಡಿಂಗ್ ಮಾಡಿದೆ.
ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ ತೋರಿಸಿದ್ದು, ಆತಂಕಗೊಂಡ ಪೈಲಟ್‌ಗಳು AI 2913ರ ಬಲ ಎಂಜಿನ್ ಅನ್ನು ಆಫ್ ಮಾಡಿದರು ಮತ್ತು ತಕ್ಷಣ IGIA ನಲ್ಲಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದ್ದಾರೆ.
ಯಾವುದೇ ಸಂಭವನೀಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು, ಅಗ್ನಿಶಾಮಕ ಯಂತ್ರಗಳು, ಆಂಬ್ಯುಲೆನ್ಸ್‌ಗಳು ಮತ್ತು ಭದ್ರತಾ ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ಸನ್ನದ್ಧರಾಗಿದ್ದರು.
A320 ನಿಯೋ ವಿಮಾನವು ಭಾನುವಾರ ಬೆಳಗ್ಗೆ 6.02 ಕ್ಕೆ ಟರ್ಮಿನಲ್ 3 ರಿಂದ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಹೊರಟಿತ್ತು. ಆದರೆ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ ಎಂದು ಏರ್ ಇಂಡಿಯಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
"ಆಗಸ್ಟ್ 31 ರಂದು ದೆಹಲಿಯಿಂದ ಇಂದೋರ್‌ಗೆ ತೆರಳುತ್ತಿದ್ದ AI2913 ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಮರಳಿತು. ಏಕೆಂದರೆ ಕಾಕ್‌ಪಿಟ್ ಸಿಬ್ಬಂದಿಗೆ ಬೆಂಕಿಯ ಸೂಚನೆ ಸಿಕ್ಕಿತು. ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸಿ, ಕಾಕ್‌ಪಿಟ್ ಸಿಬ್ಬಂದಿ ಎಂಜಿನ್ ಅನ್ನು ಆಫ್ ಮಾಡಿದರು ಮತ್ತು ದೆಹಲಿಗೆ ವಾಪಸ್ ಬಂದು, ಸುರಕ್ಷಿತವಾಗಿ ಲ್ಯಾಂಡ್ ಆಯಿತು" ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.
ವಿಮಾನವನ್ನು ತಪಾಸಣೆಗಾಗಿ ನಿಲ್ಲಿಸಲಾಯಿತು ಮತ್ತು ಪ್ರಯಾಣಿಕರನ್ನು ಇಂದೋರ್‌ಗೆ ತೆರಳುವ ಪರ್ಯಾಯ ವಿಮಾನಕ್ಕೆ ವರ್ಗಾಯಿಸಲಾಯಿತು. "ಘಟನೆಯ ಬಗ್ಗೆ ನಿಯಂತ್ರಕಕ್ಕೆ ಸರಿಯಾಗಿ ತಿಳಿಸಲಾಗಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



