ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; Video
ಅಜಿತ್ ಪವಾರ್, ನಾನು ಉಪಮುಖ್ಯಮಂತ್ರಿ, ತಕ್ಷಣ ಕಾರ್ಯಾಚರಣೆ ನಿಲ್ಲಿಸಿ ಅಲ್ಲಿಂದ ತೆರಳು ಎಂದು ಸೂಚನೆ ನೀಡಿದ್ದಾರೆ. ಆದರೆ ಪವಾರ್ ಧ್ವನಿಯನ್ನು ಗುರುತಿಸದ ಅಧಿಕಾರಿ ಅಂಜನಾ ಕೃಷ್ಣ ನನ್ನ ಮೊಬೈಲ್ಗೆ ಕರೆ ಮಾಡಿ ಎಂದು ಹೇಳುತ್ತಾರೆ.

ಮುಂಬೈ: ಅಕ್ರಮವಾಗಿ ಮಣ್ಣು ತೆಗೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಮಹಿಳಾ ಐಪಿಎಸ್ ಅಧಿಕಾರಿ ನಡುವೆ ಬಿಸಿ ಬಿಸಿ ವಾಗ್ವಾದ ನಡೆದಿದೆ.
ಫೋನ್ ಮೂಲಕ ನಡೆದ ಈ ವಾಗ್ವಾದದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಸೋಲಾಪುರ ಜಿಲ್ಲೆಯ ಕುರ್ಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಸ್ಥಳಕ್ಕೆ ಆಗಮಿಸಿದ್ದ ಐಪಿಎಸ್ ಅಧಿಕಾರಿಯೊಂದಿಗೆ ಫೋನ್ನಲ್ಲಿ ಅಜಿತ್ ಪವಾರ್ ಮಾತನಾಡಿದ್ದಾರೆ. ಅಜಿತ್ ಪವಾರ್, ನಾನು ಉಪಮುಖ್ಯಮಂತ್ರಿಯಾಗಿದ್ದು, ತಕ್ಷಣ ಕಾರ್ಯಾಚರಣೆ ನಿಲ್ಲಿಸಿ ಅಲ್ಲಿಂದ ತೆರಳು ಎಂದು ಸೂಚನೆ ನೀಡಿದ್ದಾರೆ. ಆದರೆ ಪವಾರ್ ಧ್ವನಿಯನ್ನು ಗುರುತಿಸದ ಅಧಿಕಾರಿ ಅಂಜನಾ ಕೃಷ್ಣ ನನ್ನ ಮೊಬೈಲ್ಗೆ ಕರೆ ಮಾಡಿ ಎಂದು ಹೇಳುತ್ತಾರೆ.
ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುವುದರ ವಿರುದ್ಧ ಕ್ರಮ ಕೈಗೊಳ್ಳಲು ಆಗಸ್ಟ್ 31 ರಂದು ಕುರ್ದು ಗ್ರಾಮದಲ್ಲಿದ್ದ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅಂಜನಾ ಕೃಷ್ಣ ಅವರೊಂದಿಗೆ ಪವಾರ್ ಅವರು ಕರೆ ಮಾಡಿ ಮಾತನಾಡುತ್ತಿರುವ ಎರಡು ನಿಮಿಷಗಳ ವೀಡಿಯೊ ಇದಾಗಿದೆ.
ನಾನು ಹೇಳಿದರೂ ಕೇಳುತ್ತಿಲ್ಲವಲ್ಲ' ನಿನಗೆ ಎಷ್ಟು ಧೈರ್ಯ? ನಿನ್ನ ನಂಬರ್ ಕೊಡು, ವಿಡಿಯೊ ಕರೆ ಮಾಡುವೆ ಎಂದು ಹೇಳುತ್ತಾರೆ. ನಿನ್ನ ಮೇಲಿನ ಅಧಿಕಾರಿಗಳಿಗೆ ಹೇಳಿ ಕ್ರಮ ಕೈಗೊಳ್ಳಬೇಕಾ ಎಂದಿದ್ದಾರೆ. ನಂತರ ವಿಡಿಯೊ ಕರೆ ಮಾಡಿ ಅಲ್ಲಿಂದ ತೆರಳುವಂತೆ ಅಜಿತ್ ಪವಾರ್ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

'ಶಾಮನೂರು ಕುಟುಂಬದ ಪೊಮೆರಿಯನ್ ನಾಯಿಯಂತೆ': ದಾವಣಗೆರೆ SP ಅವಹೇಳನ; ಶಾಸಕ ಬಿ.ಪಿ ಹರೀಶ್ ವಿರುದ್ಧ FIR; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


