ದೇಶ

ಜಾರ್ಖಂಡ್‌: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತ

ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ.

ಜಾರ್ಖಂಡ್‌: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತ
ಪ್ರಾತಿನಿಧಿಕ ಚಿತ್ರ
Published On :

ಚೈಬಾಸಾ (ಜಾರ್ಖಂಡ್): ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 10 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿದ್ದ ಮಾವೋವಾದಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ.

ಸುದ್ದಿಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೊಲ್ಹಾನ್ ಡಿಐಜಿ ಅನುರಂಜನ್ ಕಿಸ್ಪೊಟ್ಟಾ, 'ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ನಂತರದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಒಂದು ಶವ ಪತ್ತೆಯಾಗಿದೆ' ಎಂದಿದ್ದಾರೆ.

'ಐಜಿ (ಕಾರ್ಯಾಚರಣೆ) ಮತ್ತು ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್ ರಾಜ್ ಎಸ್, 'ಶವವನ್ನು ಸಿಪಿಐ (ಮಾವೋವಾದಿ) ನ ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ. ಈತನಿಗೆ 10 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ' ಎಂದರು.

ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಲಾಪರಲ್ ಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಚೈಬಾಸಾ ಪೊಲೀಸ್ ವರಿಷ್ಠಾಧಿಕಾರಿಗೆ ಸುಳಿವು ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ, ಭದ್ರತಾ ಪಡೆ ತಂಡಗಳು ಬೆಳಿಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಭದ್ರತಾ ಪಡೆಗಳು ತಮ್ಮ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಗಮನಿಸಿದ ಮಾವೋವಾದಿಗಳು ದಟ್ಟವಾದ ಕಾಡಿಗೆ ಓಡಿಹೋದರು ಮತ್ತು ನಂತರದ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಹನ್ಸ್ದಾ ಅವರ ಮೃತದೇಹವು ಬಂದೂಕಿನೊಂದಿಗೆ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.