ಫರಿದಾಬಾದ್ AC ಸ್ಫೋಟ: ಒಂದೇ ಕುಟುಂಬದ ಮೂವರು, ಸಾಕು ನಾಯಿ ಸಾವು; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಮಗ; Video
ಹೊಗೆಯಿಂದಾಗಿ ಉಸಿರುಗಟ್ಟಿ ಕುಟುಂಬದ ಮೂವರು ಸಾವಿಗೀಡಾಗಿದ್ದು, ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಮಗ ತನ್ನನ್ನು ತಾನು ಉಳಿಸಿಕೊಳ್ಳಲು ಕಿಟಕಿಯಿಂದ ಹೊರಗೆ ಹಾರಿದ್ದಾನೆ.

ಫರಿದಾಬಾದ್: ಹರಿಯಾಣದ ಫರಿದಾಬಾದ್ನಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಏರ್ ಕಂಡಿಷನರ್ನ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸದಸ್ಯರು ಮತ್ತು ಅವರ ಸಾಕು ನಾಯಿ ಸಾವಿಗೀಡಾಗಿರುವ ಧಾರುಣ ಘಟನೆ ನಡೆದಿದೆ.
ಎನ್ಡಿಟಿವಿ ವರದಿ ಪ್ರಕಾರ, ಸಂತ್ರಸ್ತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ.
ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಕಪೂರ್ ಕುಟುಂಬ ನೆಲೆಸಿದ್ದ ಎರಡನೇ ಮಹಡಿಗೆ ದಟ್ಟ ಹೊಗೆ ಆವರಿಸಿದೆ. ಆಗ ಕುಟುಂಬ ಗಾಢ ನಿದ್ರೆಯಲ್ಲಿತ್ತು. ಘಟನೆ ನಡೆದ ಮೊದಲ ಮಹಡಿಯಲ್ಲಿರುವ ಮನೆ ಖಾಲಿಯಾಗಿತ್ತು ಎಂದು ವರದಿಯಾಗಿದೆ.
ಹೊಗೆಯಿಂದಾಗಿ ಉಸಿರುಗಟ್ಟಿ ಕುಟುಂಬದ ಮೂವರು ಸಾವಿಗೀಡಾಗಿದ್ದು, ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಮಗ ತನ್ನನ್ನು ತಾನು ಉಳಿಸಿಕೊಳ್ಳಲು ಕಿಟಕಿಯಿಂದ ಹೊರಗೆ ಹಾರಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದೆ.
ಸ್ಫೋಟದ ದೊಡ್ಡ ಶಬ್ದ ಕೇಳಿದ ನಂತರ ಎಚ್ಚರಗೊಂಡಿದ್ದಾಗಿ ನೆರೆಹೊರೆಯವರು ಹೇಳಿದ್ದಾರೆ. ನಂತರ ನಾವು ಕಟ್ಟಡದಲ್ಲಿದ್ದ ಇತರ ಜನರನ್ನು ರಕ್ಷಿಸಲು ಧಾವಿಸಿದೆವು ಎಂದು ಮಾಯಾಂಕ್ ವರದಿಗಾರರಿಗೆ ತಿಳಿಸಿದರು.
ಏಳು ಜನರ ಕುಟುಂಬವು ನಾಲ್ಕನೇ ಮಹಡಿಯಲ್ಲಿ ವಾಸಿಸುತ್ತಿತ್ತು, ಆದರೆ ಮೂರನೇ ಮಹಡಿಯನ್ನು ಕಪೂರ್ ತಮ್ಮ ಕಚೇರಿಯಾಗಿ ಬಳಸುತ್ತಿದ್ದರು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


