Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!
ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಗರಿಯಾಬಾದ್: ಛತ್ತೀಸ್‌ಗಢದ ಗರಿಯಾಬಾದ್ ಜಿಲ್ಲೆಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕ ಸೇರಿದಂತೆ 10 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದವರಲ್ಲಿ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಮನೋಜ್ ಕೂಡಾ ಒಬ್ಬರಾಗಿದ್ದಾರೆ. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.
ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.
ಬೆಳಗ್ಗೆಯಿಂದಲೇ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಹಲವು ಹಿರಿಯ ನಕ್ಸಲ್ ನಾಯಕರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್ ಕೋಬ್ರಾ ಕಮಾಂಡೋಗಳು ಮತ್ತು ಛತ್ತೀಸ್‌ಗಢ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಹಿರಿಯ ನಕ್ಸಲ್ ನಾಯಕ ಮನೋಜ್ ಸೇರಿದಂತೆ 10 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಕಾರ್ಯಾಚರಣೆ ಮುಗಿದ ನಂತರ ಪ್ರತ್ಯೇಕವಾಗಿ ಸಮಗ್ರ ವಿವರ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗರಿಯಾಬಂದ್ ಜಿಲ್ಲೆಯಲ್ಲಿ ನಡೆಯುತ್ತಿರುವ ನಕ್ಸಲ್ ನಿರ್ಮೂಲನಾ ಕಾರ್ಯಾಚರಣೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



