15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧಂಕರ್; Video
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರ ಸಮ್ಮುಖದಲ್ಲಿ ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ (ಸೆ.9) ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರನ್ನು ಮಣಿಸಿದ್ದರು.

ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ರೆಡ್ಡಿ 300 ಮತಗಳನ್ನು ಗಳಿಸಿದ್ದರು. ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಧನಕರ್ ಸಾರ್ವಜನಿಕವಾಗಿ ಕಾಣಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


