ಹಾರುವ ಮುನ್ನವೇ ಹಾಟ್ ಏರ್ ಬಲೂನ್ ನಲ್ಲಿ ಬೆಂಕಿ: ಮಧ್ಯಪ್ರದೇಶ ಸಿಎಂ ಸ್ವಲ್ಪದರಲ್ಲೆ ಪಾರು!
ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು.

ಭೋಪಾಲ್: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಹಾಟ್ ಏರ್ ಬಲೂನ್ ಹಾರಾಟದಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ನೆಲದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



