ದೇಶ

Thane: ಒಂದೇ ದಿನದಲ್ಲಿ 67 ನಾಯಿ ಕಡಿತ ಪ್ರಕರಣ ವರದಿ; ಸ್ಥಳೀಯರಲ್ಲಿ ಆತಂಕ

ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

Thane: ಒಂದೇ ದಿನದಲ್ಲಿ 67 ನಾಯಿ ಕಡಿತ ಪ್ರಕರಣ ವರದಿ; ಸ್ಥಳೀಯರಲ್ಲಿ ಆತಂಕ
ಬೀದಿ ನಾಯಿ
Published On :

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ಮತ್ತು ಡೊಂಬಿವ್ಲಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ 67 ಮಂದಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ವಾರಗಳಿಂದ, ಈ ಪ್ರದೇಶದಲ್ಲಿ ನಾಯಿ ಕಡಿತದ ಘಟನೆಗಳು ವಿರಳವಾಗಿ ಸಂಭವಿಸುತ್ತಿದ್ದವು. ಆದರೆ ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ಕಲ್ಯಾಣ, ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ಘಟನೆಗಳಿಗೆ ಕಾರಣವಾಗಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ರೇಬೀಸ್ ನಿರೋಧಕ ಲಸಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಕೆಡಿಎಂಸಿ ನಿಯಮಿತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಪ್ರತಿ ತಿಂಗಳು 1,000 ರಿಂದ 1,100 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ನಿವಾಸಿಗಳು ತುರ್ತು ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.