ದೇಶ

ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video

ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ.

ಗುಜರಾತ್: ಭರೂಚ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಮುಗಿಲೆತ್ತರಕ್ಕೆ ಚಾಚಿದ ಬೆಂಕಿ ಜ್ವಾಲೆ; Video
Published On :

ಭರೂಚ್: ಗುಜರಾತ್​ನ ಭರೂಚ್ ಜಿಲ್ಲೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಐಡಿಸಿ ಪನೋಲಿಯಲ್ಲಿರುವ ಸಂಘ್ವಿ ಆರ್ಗಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆ ಮುಗಿಲೆತ್ತರಕ್ಕೆ ತನ್ನ ಕೆನ್ನಾಲಿಗೆ ಚಾಚಿದ್ದು, ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಆವರಿಸಿದೆ. ಸುತ್ತಮುತ್ತಲಿನವರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಂಕಿಯ ಹಾನಿಯ ಪ್ರಮಾಣ ಮತ್ತು ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳ ವರದಿಯಾಗಿಲ್ಲ. ಸ್ಥಳದಲ್ಲಿ 15 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.