ದೇಶ

Maharashtra: ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಪ್ರಮಾಣ ವಚನ ಸ್ವೀಕಾರ

ಸೋಮವಾರ ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವವ್ರತ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Maharashtra: ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಪ್ರಮಾಣ ವಚನ ಸ್ವೀಕಾರ
ನೂತನ ರಾಜ್ಯಪಾಲ ಆಚಾರ್ಯ ದೇವವ್ರತ್
Published On :

ಮುಂಬೈ: ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ಸಿಪಿ ರಾಧಾಕೃಷ್ಣನ್ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗುಜರಾತ್ ಗವರ್ನರ್ ಆಚಾರ್ಯ ದೇವವ್ರತ್ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರ ಹೊಣೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ವಾರ ವಹಿಸಿದ್ದರು.

ಸೋಮವಾರ ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇವವ್ರತ್ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತಿತರ ರಾಜ್ಯದ ಸಚಿವರು, ಉನ್ನತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. 66 ವರ್ಷದ ದೇವವ್ರತ್ ಅವರು 2019 ರಿಂದ ಗುಜರಾತ್ ರಾಜ್ಯಪಾಲರಾಗಿದ್ದಾರೆ. ಅವರು ಹಿಂದಿ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ ಮತ್ತು ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.